ನಂಜನಗೂಡು: ನಗರದ ಬಜಾರ್ ರಸ್ತೆಯಲ್ಲಿ ವಾಣಿಜ್ಯ ಮಳಿಗೆಗಳ ಮಾಲೀಕರು ಅಕ್ರಮವಾಗಿ ಅತಿಕ್ರಮಿಸಿಕೊಂಡಿದ್ದ ಫುಟ್ಪಾತ್ ಅನ್ನು ನಗರಸಭೆಯ ಅಧಿಕಾರಿಗಳು ಜೆಸಿಬಿ ಬಳಸಿ ತೆರವುಗೊಳಿಸಿದರು.

ನಗರದ ಬಜಾರ್ ರಸ್ತೆಯಲ್ಲಿ ಗೀತಾ ಮೆಡಿಕಲ್ ವೃತ್ತದಿಂದ ಶ್ರೀಕಂಠೇಶ್ವರ ದೇವಾಲಯದವರೆಗಿನ ಅತಿಕ್ರಮ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ನಗರಸಭಾ ಆಯುಕ್ತ ಎಂ.ಬಸವರಾಜು ಮಾತನಾಡಿ, ‘ನಂಜನಗೂಡು ಪವಿತ್ರ ಯಾತ್ರಾ ಸ್ಥಳವಾಗಿದ್ದು, ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ದೇವಾಲಯಕ್ಕೆ ಆಗಮಿಸಲಿದ್ದಾರೆ. ರೈಲು ಮೂಲಕ ಬರುವ ಭಕ್ತರು ಬಜಾರ್ ರಸ್ತೆಯಲ್ಲಿ ತೆರಳುವುದರಿಂದ ಜನಸಂದಣಿ ಹೆಚ್ಚಾಗಿದ್ದು, ಫುಟ್ಪಾತ್ ಅತಿಕ್ರಮಿಸಿ ಮುಂಚಾಚು ನಿರ್ಮಿಸಿ ವಸ್ತುಗಳನ್ನು ಇಟ್ಟುಕೊಂಡು ವ್ಯಾಪಾರದಲ್ಲಿ ನಿರತರಾಗುತ್ತಿದ್ದರು, ಇದರಿಂದಾಗಿ ಸಂಚಾರ ದಟ್ಟಣೆ ಅಧಿಕವಾಗಿ ಸಾರ್ವಜನಿಕರಿಂದ ಹಲವು ಬಾರಿ ದೂರುಗಳು ಕೇಳಿ ಬಂದಿದ್ದವು.ಈ ಬಗ್ಗೆ ಮಳಿಗೆಗಳ ಮಾಲೀಕರಿಗೆ ಹಲವು ಬಾರಿ ನೋಟಿಸ್ ಜಾರಿ ಮಾಡಿ ಪುಟ್ಪಾತ್ ತೆರವು ಮಾಡುವಂತೆ ಎಚ್ಚರಿಕೆ ನೀಡಿದ್ದರೂ ಮಾಲೀಕರು ಎಚ್ಚೆತ್ತುಕೊಳ್ಳದಿರುವುದರಿಂದ ಜಿಲ್ಲಾಧಿಕಾರಿ ಮತ್ತು ನ್ಯಾಯಾಲಯದ ಆದೇಶದಂತೆ ಪೊಲೀಸರ ಜೊತೆಗೂಡಿ ನಗರಸಭೆಯ ವತಿಯಿಂದ ತೆರವು ಕಾರ್ಯಾಚರಣೆ ನಡೆಸಲಾಗಿದೆ’ ಎಂದರು.

‘ಈ ಕಾರ್ಯಾಚರಣೆ ನಿರಂತರವಾಗಿದ್ದು, ಒಂದು ವೇಳೆ ವಾಣಿಜ್ಯ ಮಳಿಗೆಗಳ ಮಾಲೀಕರು ಫುಟ್ಪಾತ್ ಅತಿಕ್ರಮಿಸಿ ವಸ್ತುಗಳನ್ನು ಇಟ್ಟುಕೊಂಡಲ್ಲಿ ಅವುಗಳನ್ನು ವಶಪಡಿಸಿಕೊಳ್ಳುವುದರ ಜೊತೆಗೆ ದಂಡ ವಿಧಿಲಾಗುವುದು’ ಎಂದು ಎಚ್ಚರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-38-187806784

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.