ನಂಜನಗೂಡು: ‘ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿಗೆ ಹೆಸರುವಾಸಿಯಾಗಿರುವ ನಂಜನಗೂಡಿನ ಸಾಂಸ್ಕೃತಿಕ ಪರಂಪರೆಯ ವೈಭವವನ್ನು ಉತ್ತೇಜಿಸಲು, ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡಲು ಗರಳಪುರಿ ಉತ್ಸವ ಹಮ್ಮಿಕೊಳ್ಳಲಾಗಿದೆ’ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.

ನಗರದ ಗುರುಭವನದಲ್ಲಿ ಶನಿವಾರ ಗರಳಪುರಿ ಉತ್ಸವ ಪ್ರಯುಕ್ತ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದಿಂದ ಆಯೋಜಿಸಿದ್ದ ಭಾವಗೀತೆ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.

‘ನಂಜನಗೂಡು ಕನ್ನಡದ ಮೊದಲ ಮಹಿಳಾ ಕಾದಂಬರಿಗಾರ್ತಿ ತಿರುಮಲಾಂಬ ಸೇರಿದಂತೆ ಸಂಗೀತ ಕ್ಷೇತ್ರದ ಹಲವು ಸಾಧಕರನ್ನು ಹೊಂದಿತ್ತು. ಶ್ರೀಕಂಠೇಶ್ವರ ಸ್ವಾಮಿ ದೊಡ್ಡ ಜಾತ್ರಾ ಮಹೋತ್ಸವದ ಅಂಗವಾಗಿ ಉತ್ಸವ ನಡೆಸಲಾಗುತ್ತಿದೆ. ಕ್ಷೇತ್ರದ ಜನರನ್ನು ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಒಂದುಗೂಡಿಸುವ ಪ್ರಯತ್ನ ನಡೆಸಲಾಗಿದೆ’ ಎಂದರು.

‘ಸಂಗೀತ, ಸಾಹಿತ್ಯ ಕ್ಷೇತ್ರದ ಆಸಕ್ತರು ಪ್ರತಿಭೆ ಪ್ರದರ್ಶಿಸಲು ವೇದಿಕೆ ಕಲ್ಪಿಸಲಾಗುತ್ತಿದೆ. ಯುವಜನರಲ್ಲಿ ಕನ್ನಡದ ಬಗ್ಗೆ ಅಭಿಮಾನ ಬೆಳೆಸಲು ಸಹಕಾರಿಯಾಗುತ್ತವೆ, 9 ದಿನಗಳ ಉತ್ಸವದಲ್ಲಿ ಸಾರ್ವಜನಿಕರು ಭಾಗವಹಿಸಿ ಯಶಸ್ವಿಗೊಳಿಸಬೇಕು’ ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ಕುರಹಟ್ಟಿ ಮಹೇಶ್, ನಗರ ಘಟಕದ ಅಧ್ಯಕ್ಷ ಸಿ.ಎಂ.ಶಂಕರ್, ಶ್ರೀಕಂಠ ನಾಯಕ, ವಾಲ್ಮೀಕಿ ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ಎಸ್.ಸಿ.ಬಸವರಾಜು, ನಗರಸಭಾ ಮಾಜಿ ಅಧ್ಯಕ್ಷ ಶ್ರೀಕಂಠಸ್ವಾಮಿ, ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷೆ ಲತಾ ಮೋಹನ್, ಶಶಿರೇಖಾ, ಮುಖಂಡರಾದ ಕೆ.ಎಂ.ಬಸವರಾಜು, ಶ್ವೇತ ಲಕ್ಷ್ಮಿ, ಎನ್.ಎಂ.ಮಂಜುನಾಥ್, ಗುರುಮಲ್ಲಪ್ಪ, ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕುಮಾರ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-38-1394074851

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.