ನಂಜನಗೂಡು: ‘ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ತಾಲ್ಲೂಕು ವೀರಶೈವ ಲಿಂಗಾಯತ ಸಂಘ-ಸಂಸ್ಥೆಗಳ ವತಿಯಿಂದ ಮೇ 12ರಂದು ನಗರದಲ್ಲಿ ಬಸವೇಶ್ವರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಗುವುದು’ ಎಂದು ಎಂದು ತಾಲ್ಲೂಕು ವೀರಶೈವ ಮಹಾಸಭಾ ಅಧ್ಯಕ್ಷ ಎಸ್ಎಂ. ಕೆಂಪಣ್ಣ ತಿಳಿಸಿದರು.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದು ಬೆಳಿಗ್ಗೆ 8.30ಕ್ಕೆ ನಗರದ ಶ್ರೀಕಂಠೇಶ್ವರ ದೇವಸ್ಥಾನದ ಆವರಣದಿಂದ ಬೆಳ್ಳಿರಥದಲ್ಲಿ ಜಗಜ್ಯೋತಿ ಬಸವೇಶ್ವರರ ಪುತ್ಥಳಿಯನ್ನು ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಮೆರವಣಿಗೆ ಮಾಡಲಾಗುವುದು’ ಎಂದು ಮಾಹಿತಿ ನೀಡಿದರು.‘ಮಧ್ಯಾಹ್ನ 12ಕ್ಕೆ ನಗರದ ಜೆಎಸ್ಎಸ್ ಮಂಗಳ ಮಂಟಪದಲ್ಲಿ ಧಾರ್ಮಿಕ ಸಭೆ ಆಯೋಜಿಸಲಾಗಿದೆ. ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ದೇವನೂರು ಮಠದ ಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಗುರು ಕಂಬಳೇಶ್ವರ ಮಲ್ಲನ ಮೂಲೆಮಠದ ಇಮ್ಮಡಿ ಸಿದ್ದಲಿಂಗ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಕುಂದೂರು ಮಠದ ಶರತ್ಚಂದ್ರ ಸ್ವಾಮೀಜಿ ಮುಖ್ಯ ಭಾಷಣ ಮಾಡುವರು. ವಿವಿಧ ಮಠಗಳ ಮಠಾಧೀಶರು ಭಾಗವಹಿಸಲಿದ್ದಾರೆ. ತಾಲ್ಲೂಕಿನ ಸಾರ್ವಜನಿಕರು ಪಾಲ್ಗೊಳ್ಳಬೇಕು’ ಎಂದು ಕೋರಿದರು.

ಕಾರ್ಯದರ್ಶಿ ಶಿವಪ್ಪ ದೇವರು ಮಾತನಾಡಿ, ‘ಬೆಳಿಗ್ಗೆ 7ಕ್ಕೆ ನಗರದ ಹಳೆ ಜೆಎಸ್ಎಸ್ ಕಾಲೇಜಿನಲ್ಲಿ ಉಪಾಹಾರದ ವ್ಯವಸ್ಥೆ ಮಾಡಲಾಗಿದೆ. 6ಸಾವಿರ ಜನರಿಗೆ ಮಧ್ಯಾಹ್ನದ ಪ್ರಸಾದ ವ್ಯವಸ್ಥೆ ಇದೆ’ ಎಂದು ತಿಳಿಸಿದರು. ಮಹಾಸಭಾ ಖಜಾಂಚಿ ಎಂ.ಪಿ.ನಟರಾಜು, ಸುಧಾ ಚಿಕ್ಕಮಾದಪ್ಪ, ಎಚ್.ಬಿ. ರೇವಣ್ಣ, ಎನ್. ಮಹೇಶ್, ರಾಜೇಂದ್ರ ಪ್ರಸಾದ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-38-1220841610

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.