ನಂಜನಗೂಡು: ಪಟ್ಟಣದಲ್ಲಿ ₹ 5 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ ಗುರುವಾರ ಚಾಲನೆ ನೀಡಿದರು.

ನಗರದ ಫುಡ್ಸ್ಟ್ರೀಟ್ಗೆ ₹ 68 ಲಕ್ಷ ವೆಚ್ಚದಲ್ಲಿ ಮೂಲಸೌಕರ್ಯ ಅಭಿವೃದ್ಧಿ, ಜಾನುವಾರು ಮಾರುಕಟ್ಟೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ತಾಲ್ಲೂಕಿನ ನಲ್ಲಿತಾಳಪುರದಲ್ಲಿ ಮುಖ್ಯರಸ್ತೆ ಅಭಿವೃದ್ಧಿ, ದುಗ್ಗಹಳ್ಳಿ- ಶೆಟ್ಟಳ್ಳಿ-ಕಡಬೂರು- ಆಕಳ-ಲಲಿತಾಳಪುರಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ ಅಭಿವೃದ್ಧಿಗಾಗಿ ₹ 4.50 ಕೋಟಿ ಸೇರಿದಂತೆ ಒಟ್ಟು ₹ 5.70 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ.ಈ ಮೂಲಕ ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದು ಶಾಸಕರು ಹೇಳಿದರು.

ಪಾದಚಾರಿ ಮಾರ್ಗದ ಮೇಲೆ ವ್ಯಾಪಾರ ಮಾಡುತ್ತಿದ್ದವರನ್ನು ನಗರದ ಕವರ್ಡೆಕ್ ಮೇಲೆ ನಿರ್ಮಾಣ ಮಾಡಿರುವ ಫುಡ್ಸ್ಟ್ರೀಟ್ಗೆ ಸ್ಥಳಾಂತರಿಸಲಾಗಿತ್ತು. ಇಲ್ಲಿನ ವ್ಯಾಪಾರಿಗಳು ಮತ್ತು ನಾಗರಿಕರಿಗೆ ಮೂಲಸೌಕರ್ಯ ಒದಗಿಸಲು ₹ 68 ಲಕ್ಷ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಮತ್ತು ಪಾದಚಾರಿ ಮಾರ್ಗ ನಿರ್ಮಾಣ ಕಾಮಗಾರಿ ಹಾಗೂ ಜಾನುವಾರು ಮಾರುಕಟ್ಟೆಯಲ್ಲಿ ₹ 5 ಲಕ್ಷ ವೆಚ್ಚದ ಶುದ್ಧ ಕುಡಿಯುವ ನೀರಿನ ಘಟಕದ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಫುಡ್ಸ್ಟ್ರೀಟ್ನಲ್ಲಿ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ರಸ್ತೆ ಅಭಿವೃದ್ಧಿ: ಹುಲ್ಲಹಳ್ಳಿ ರಸ್ತೆಯ ಮೂಲಕ ದುಗ್ಗಹಳ್ಳಿ, ಶೆಟ್ಟಹಳ್ಳಿ, ಕಡಬೂರು ಆಕಳ, ನಲ್ಲಿತಾಳಪುರ ಚಂದ್ರವಾಡಿ ಮತ್ತು ಕಪ್ಪಸೋಗೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆ ಹಾಳಾಗಿದ್ದು, ಗ್ರಾಮಸ್ಥರು ಅಭಿವೃದ್ಧಿಪಡಿಸುವಂತೆ ಮನವಿ ಮಾಡಿದ್ದರು. ₹ 4.50 ಕೋಟಿ ವೆಚ್ಚದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು.

ಮುಖ್ಯಮಂತ್ರಿ ವಿಶೇಷ ಅನುದಾನದಡಿಯಲ್ಲಿ ₹ 50 ಕೋಟಿ ಮಂಜೂರಾಗಿದ್ದು, ಅದರಲ್ಲಿ ₹ 7.50 ಕೋಟಿಯನ್ನು ಬೀದಿಗಳ ಅಭಿವೃದ್ಧಿಗೆ ಮೀಸಲಿಡಲಾಗಿದೆ ಎಂದರು.

ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಂ.ಶಂಕರ್, ಹುಲ್ಲಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಕಂಠ ನಾಯಕ, ನಗರಸಭೆ ಮಾಜಿ ಅಧ್ಯಕ್ಷ ಶ್ರೀಕಂಠ ಸ್ವಾಮಿ, ಮಾಜಿ ಸದಸ್ಯರಾದ ಎಸ್.ಪಿ.ಮಹೇಶ್, ಗಾಯತ್ರಿ, ಕೆ.ಎಂ.ಬಸವರಾಜು, ರವಿ, ಮುಖಂಡರಾದ ಗೋವಿಂದರಾಜು, ಅಭಿನಂದನ್ ಪಟೇಲ್, ದೇಬೂರು ಅಶೋಕ್, ಹುಲ್ಲಹಳ್ಳಿ ಮಹೇಶ್, ನಾಗಣ್ಣ, ಯುವ ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ವಿಜಯಕುಮಾರ್, ಹೆಗ್ಗಡಹಳ್ಳಿ ಮಹೇಶ್, ಲೋಕೋಪಯೋಗಿ ಇಲಾಖೆ ಎಇಇ ರಮೇಶ್, ಎಇ ಬಸವರಾಜು, ಕೆಆರ್ಐಡಿಎಲ್ ಎಇ ಶರಣ್, ಪುರುಷೋತ್ತಮ್, ಪಿಡಿಒ ಶ್ವೇತಾ, ಎಇ ಯಶ್ವಂತ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-38-625740433

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.