ನಂಜನಗೂಡು: ‘ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಸಾರ್ವಜನಿಕ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸಮರ್ಪಕವಾಗಿ ಉತ್ತಮವಾದ ಆರೋಗ್ಯ ಸೇವೆಯನ್ನು ಒದಗಿಸಬೇಕು’ ಎಂದು ಶಾಸಕ ದರ್ಶನ್ ಧ್ರುವನಾರಾಯಣ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿ ಆಸ್ಪತ್ರೆಯ ವೈದ್ಯಾಧಿಕಾರಿಗಳ ಮತ್ತು ಆಡಳಿತ ಅಧಿಕಾರಿಗಳ ಜೊತೆ ಶನಿವಾರ ತುರ್ತು ಸಭೆ ನಡೆಸಿ ಅವರು ಮಾತನಾಡಿದರು.

‘ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ತುರ್ತು ಸಂದರ್ಭದಲ್ಲಿ ಚಿಕಿತ್ಸೆ ನೀಡಲಾಗುತ್ತಿಲ್ಲ, ಸಾಮಾನ್ಯ ಹೆರಿಗೆಯಾದರೂ ಮೈಸೂರಿಗೆ ಕರೆದುಕೊಂಡು ಹೋಗುವಂತೆ ಶಿಫಾರಸು ಮಾಡಲಾಗುತ್ತಿದೆ ಎಂಬ ಆರೋಪಗಳಿವೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ತುರ್ತು ಸಂದರ್ಭದಲ್ಲಿ ಚಿಕಿತ್ಸೆಗೆ ವೈದ್ಯರು ಮುಂದಾಗುತ್ತಿಲ್ಲ, ಅತ್ಯಾಧುನಿಕ ಸ್ಕ್ಯಾನಿಂಗ್ ಯಂತ್ರಗಳ ಸೌಲಭ್ಯವಿದ್ದರೂ ಹೊರಗಡೆ ಸ್ಕ್ಯಾನಿಂಗ್ ಮಾಡಿಸುವಂತೆ ಚೀಟಿ ನೀಡಲಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ. ಇದು ಮರುಕಳಿಸದಂತೆ ನೋಡಿಕೊಳ್ಳಬೇಕು’ ಎಂದು ತಾಕೀತು ಮಾಡಿದರು.

ಸಮನ್ವಯ ಇರಲಿ: ‘ವೈದ್ಯರು–ವೈದ್ಯಾಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ತುರ್ತು ಪರಿಸ್ಥಿತಿಯಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಿ ನೆರವಾಗಬೇಕು. ಆಸ್ಪತ್ರೆಗೆ ಬರುವ ಎಲ್ಲಾ ಸಾರ್ವಜನಿಕರಿಗೂ ಉತ್ತಮ ಗುಣಮಟ್ಟದ ಚಿಕಿತ್ಸೆ ಲಭ್ಯವಾಗುವಂತೆ ಕ್ರಮ ವಹಿಸಬೇಕು’ ಎಂದು ನಿರ್ದೇಶನ ನೀಡಿದರು.

ಆಸ್ಪತ್ರೆಯ ಆಡಳಿತಾಧಿಕಾರಿ ನಾಗರಾಜು ಮಾತನಾಡಿ, ‘ಆಸ್ಪತ್ರೆಗೆ ನಿತ್ಯ 800ರಿಂದ 900 ಹೊರರೋಗಿಗಳು ಬರುತ್ತಿದ್ದಾರೆ. ವೈದ್ಯರು ಮತ್ತು ಸಿಬ್ಬಂದಿ ಕೊರತೆಯಿಂದ ಹೆಚ್ಚಿನ ಕೆಲಸದ ಒತ್ತಡವಿದೆ. ಈ ನಡುವೆಯೂ ಸಮರ್ಪಕವಾದ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾದ ಕೆಲವು ಪ್ರಕರಣಗಳಿರುವ ದಿನಕ್ಕೆ 15ರಿಂದ 20 ರೋಗಿಗಳನ್ನು ಮಾತ್ರ ಮೈಸೂರಿನ ಆಸ್ಪತ್ರೆಗೆ ಹೋಗುವಂತೆ ತಿಳಿಸಲಾಗುತ್ತಿದೆ. ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗಳ ಕೊರತೆ ಇಲ್ಲ. ಸೂಕ್ತ ಚಿಕಿತ್ಸೆ ಒದಗಿಸಲಾಗುತ್ತಿದೆ’ ಎಂದು ಸಮರ್ಥಿಸಿಕೊಂಡರು.

ಜಾಗೃತಿ ಮೂಡಿಸಿ: ‘ಹಂಟಾ ವೈರಸ್ ತಡೆಗಟ್ಟುವ ಸಲುವಾಗಿ ಗ್ರಾಮ ಪಂಚಾಯಿತಿ ಮತ್ತು ನಗರ ಪ್ರದೇಶಗಳಲ್ಲಿ ಜನರಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಬೇಕು. ಸ್ವಚ್ಛತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಪಿಡಿಒಗಳಿಗೆ ನಿರ್ದೇಶನ ನೀಡಬೇಕು’ ಎಂದು ತಾಲ್ಲೂಕು ಪಂಚಾಯಿತಿ ಇಒ ಜರಾಲ್ಡ್ ರಾಜೇಶ್ ಅವರಿಗೆ ಸೂಚಿಸಿದರು.

‘ತಾಲ್ಲೂಕಿನಲ್ಲಿ 23 ನಕಲಿ ವೈದ್ಯರು ಕಾರ್ಯನಿರ್ವಹಿಸುತ್ತಿರುವ ಬಗ್ಗೆ ವ್ಯಾಪಕ ದೂರಿದೆ. ಈ ಹಾವಳಿ ತಡೆಗೆ ಕ್ರಮ ಕೈಗೊಳ್ಳಬೇಕು’ ಎಂದು ಟಿಎಚ್ಒ ಈಶ್ವರ್ ಕಾನಟ್ಕೆ ಅವರಿಗೆ ನಿರ್ದೇಶನ ನೀಡಿದರು.

‘ಮಾಂಸ ಮಾರುಕಟ್ಟೆಯಲ್ಲಿ ಸ್ವಚ್ಛತೆ ಇಲ್ಲ ಎಂಬ ಬಗ್ಗೆ ದೂರಿದೆ. ನಗರಸಭೆ ಅಧಿಕಾರಿಗಳು ಸ್ವಚ್ಛತೆಗೆ ಆದ್ಯತೆ ನೀಡಬೇಕು. ಪಶುವೈದ್ಯಾಧಿಕಾರಿಗಳ ಸೀಲ್ ಹಾಕಿ ಸರ್ಟಿಫಿಕೇಟ್ ಪಡೆದ ಮಾಂಸವನ್ನು ಮಾತ್ರ ಮಾರುವಂತೆ ಕ್ರಮ ವಹಿಸಬೇಕು’ ಎಂದು ನಗರಸಭೆ ಆಯುಕ್ತ ಎಂ.ಬಸವರಾಜು ಅವರಿಗೆ ಸೂಚಿಸಿದರು.

ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ತಹಶೀಲ್ದಾರ್ ಸ್ಮಿತಾರಾಮು, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಶಿವಪ್ರಸಾದ್, ಮುಖಂಡರಾದ ವಾಲೆ ನಾಗರಾಜು, ಮಂಜುನಾಥ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.