ನಂಜನಗೂಡು: ನಗರದ ಹಂಡುವಿನಹಳ್ಳಿ ಬಡಾವಣೆಯ ಕಂಠಿ ಬೀದಿಯಲ್ಲಿ ಮಂಗಳವಾರ ರಾತ್ರಿ ಮನೆ ಬಾಗಿಲು ಮುರಿದ ಕಳ್ಳರು 25 ಗ್ರಾಂ ಚಿನ್ನದ ಆಭರಣ ಹಾಗೂ ₹20 ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ.

ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಶುಶ್ರೂಷಕಿಯಾಗಿ ಕೆಲಸ ಮಾಡುವ ಭಾಗ್ಯಶ್ರೀ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಮಂಗಳವಾರ ರಾತ್ರಿ ಭಾಗ್ಯಶ್ರೀ ಅವರು ಎಂದಿನಂತೆ ರಾತ್ರಿ ಪಾಳಿ ಕೆಲಸಕ್ಕೆ ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ತೆರಳಿದ್ದಾರೆ, ಮನೆಯಲ್ಲಿ ಯಾರು ಇಲ್ಲದೆ ಇರುವುದನ್ನು ಗಮನಿಸಿದ ಕಳ್ಳರು ಬಾಗಿಲು ಮೀಟಿ ಕಳ್ಳತನ ಮಾಡಿದ್ದಾರೆ.

ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಮಹಜರು ನಡೆಸಿದರು. ಶ್ವಾನದಳ, ಬೆರಳಚ್ಚು ತಜ್ಞರನ್ನು ಕರೆಸಿ ಪರಿಶೀಲಿಸಿದರು. ಸಿಸಿಟಿವಿ ಕ್ಯಾಮೆರಾಗಳನ್ನು ಪರೀಕ್ಷೆಗೆ ಒಳಪಡಿಸಿ ಕಳ್ಳರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-38-384367651

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.