ನಂಜನಗೂಡು: ‘ಜನಸಾಮಾನ್ಯರ ಕೆಲಸ ಕಾರ್ಯಗಳಿಗೆ ತೊಡಕಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು’ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.

ನಗರದ ವಾಲ್ಮೀಕಿ ಭವನದಲ್ಲಿ ಸೋಮವಾರ ನಡೆದ ಕರ್ನಾಟಕ ಅಭಿವೃದ್ಧಿ ಯೋಜನೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

‘ನಗರದ ಬಜಾರ್ ರಸ್ತೆಯನ್ನು ಫುಟ್ಪಾತ್ ವ್ಯಾಪಾರಿಗಳು ಅತಿಕ್ರಮಿಸಿಕೊಂಡು ವಾಹನ ಸಂಚಾರಕ್ಕೆ ತೊಡಕುಂಟು ಮಾಡುತ್ತಿರುವ ಬಗ್ಗೆ ಸ್ಥಳೀಯರು ದೂರಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದರೂ ನಗರಸಭೆ ಅಧಿಕಾರಿಗಳು ಕ್ರಮವಹಿಸಿಲ್ಲ. ಜನರ ಕೆಲಸಕ್ಕೆ ಅಸಡ್ಡೆ ತೋರುವವರು ಇಲ್ಲಿಂದ ತೆರಳಬಹುದು’ ಎಂದು ಎಚ್ಚರಿಸಿದರು.

‘ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಅಸಮರ್ಪಕ ಪೂರೈಕೆ ಬಗ್ಗೆ ಜನರು ದೂರುತ್ತಿದ್ದಾರೆ. ಕೆಲವೆಡೆ ನೀರಿನ ಟ್ಯಾಂಕ್ಗಳು ಶಿಥಿಲಾವಸ್ಥೆಗೆ ತಲುಪಿದ್ದು, ಜಲ ಜೀವನ್ ಮಿಷನ್ ಯೋಜನೆಯೂ ಸಮರ್ಪಕವಾಗಿ ಅನುಷ್ಠಾನಗೊಂಡಿಲ್ಲ. ಆದ್ಯತೆ ಮೇರೆಗೆ ಕಾಮಗಾರಿ ಪೂರ್ಣಗೊಳಿಸಲು ಮುಂದಾಗಬೇಕು’ ಎಂದು ಸೂಚಿಸಿದರು.

ಹಳ್ಳಿಗಳಲ್ಲಿ ಮದ್ಯ ಅಕ್ರಮ ಮಾರಾಟ ವ್ಯಾಪಕವಾಗಿ ನಡೆಯುತ್ತಿದೆ. ಆದಾಯದ ಹೆಸರಿನಲ್ಲಿ ಅನಧಿಕೃತ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸುವುದು ಸರಿಯಲ್ಲ. ಮದ್ಯದಂಗಡಿಗಳ ಮಾಲೀಕರ ಮೇಲೆ ದೂರು ದಾಖಲಿಸಬೇಕು. ಡ್ರಗ್ಸ್ ಬಳಕೆ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.

ಸಂಸದ ಸುನೀಲ್ ಬೋಸ್ ಮಾತನಾಡಿ, ‘ಸಾರ್ವಜನಿಕ ಕೆಲಸದಲ್ಲಿ ಬೇಜವಾಬ್ದಾರಿ ವರ್ತನೆ ತೋರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗುವುದು’ ಎಂದು ಎಚ್ಚರಿಸಿದರು.

ಸಭೆಯಲ್ಲಿ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ಧರಾಮಯ್ಯ, ತಾಲ್ಲೂಕು ಪಂಚಾಯಿತಿ ಇಒ ಜೆರಾಲ್ಡ್ ರಾಜೇಶ್, ಟಿಎಪಿಸಿಎಂಎಸ್ ಅಧ್ಯಕ್ಷ ಕುರಹಟ್ಟಿ ಮಹೇಶ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಚೆನ್ನಪ್ಪ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-38-647857343

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.