ನಂಜನಗೂಡು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾದ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ನಗರದಲ್ಲಿ ಶನಿವಾರ ಯುವ ಕಾಂಗ್ರೆಸ್ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಇಲ್ಲಿನ ಹುಲ್ಲಹಳ್ಳಿ ವೃತ್ತದ ಬಳಿ ಜಮಾವಣೆಗೊಂಡ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಅಣಕು ಪ್ರದರ್ಶನ ನಡೆಸಿದರು.

ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯಕುಮಾರ್ ಮಾತನಾಡಿ, ‘ಕೇಂದ್ರ ಬಿಜೆಪಿ ಸರ್ಕಾರದ ಅಧೀನದಲ್ಲಿರುವ ಎನ್ಟಿಎ ಏಜೆನ್ಸಿ ಸಂಸ್ಥೆಯು ನೀಟ್ ಪ್ರಶ್ನೆಪತ್ರಿಕೆಯನ್ನು ಸೋರಿಕೆ ಮಾಡಿ ಭ್ರಷ್ಟಾಚಾರ ನಡೆಸಿದೆ. ಇದರಿಂದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿದರು.

ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಹೆಗ್ಗಡಹಳ್ಳಿ ಮಹೇಶ್ ಮಾತನಾಡಿ, ‘ಎನ್ಟಿಎ ಏಜೆನ್ಸಿಯನ್ನು ರದ್ದುಗೊಳಿಸಿ ಬೇರೆ ಸಂಸ್ಥೆಯ ಮೂಲಕ ಪರೀಕ್ಷೆ ನಡೆಸಬೇಕು. ಅಲ್ಲದೆ ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾಗಿರುವ ತಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು’ ಎಂದು ಆಗ್ರಹಿಸಿದರು.

ಚಂದನ್ ಗೌಡ, ವಿನಯ್, ಸುಕುಮಾರ್, ರಫೀಕ್ ಅಲಿ, ಆದರ್ಶ್, ಹರೀಶ, ವಸಂತ, ಪ್ರಕೃತ್, ಮನೋಜ್, ಲೋಕೇಶ್, ವಿನಯ್, ವಿಶಾಂತ್, ಸುನಿಲ್, ರಾಜೇಂದ್ರ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-38-778303120

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.