ನಂಜನಗೂಡು: ಮಾನವ ಮತ್ತು ಪ್ರಾಣಿ ಸಂಘರ್ಷವನ್ನು ತಪ್ಪಿಸುವ ಸಲುವಾಗಿ ಓಂಕಾರ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ₹ 5. 44 ಕೋಟಿ ವೆಚ್ಚದಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.

ಓಂಕಾರ ಅರಣ್ಯ ಪ್ರದೇಶದಲ್ಲಿ ಬ್ಯಾರಿಕೇಡ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ಯಡಿಯಾಲ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ಪ್ರಾಣಿ ಸಂಘರ್ಷದಿಂದಾಗಿ ಬೆಳೆ ಹಾನಿ ಮತ್ತು ಪ್ರಾಣ ಹಾನಿ ಸಂಭವಿಸಿತ್ತು. ಸಚಿವ ಈಶ್ವರ ಖಂಡ್ರೆ ಅವರನ್ನು ಸ್ಥಳಕ್ಕೆ ಕರೆಸಿ ಇಲ್ಲಿನ ಸಮಸ್ಯೆಯ ಬಗ್ಗೆ ಅರಿವು ಮೂಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಯಡಿಯಾಲ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ₹ 14 ಕೋಟಿ ವೆಚ್ಚದಲ್ಲಿ ರೈಲ್ವೆ ಬ್ಯಾರಿಕೇಡ್ ಮತ್ತು ಮೆಸ್ ನಿರ್ಮಾಣ ಮಾಡಲಾಗಿತ್ತು. ಇದರಿಂದ ಆ ಭಾಗದಲ್ಲಿ ಪ್ರಾಣಿಗಳು ನಾಡಿನತ್ತ ಬರುವುದು ತಪ್ಪಿದೆ. ಓಂಕಾರ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಸುಮಾರು 8 ಕಿ.ಮೀವರೆಗೆ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಬಾಕಿ ಇತ್ತು. ಇದರಿಂದ ಕಾಡಂಚಿನಲ್ಲಿರುವ ದೇಪೇಗೌಡನಪುರ, ಮಲ್ಲಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿತ್ತು. ಕಾಡು ಪ್ರಾಣಿಗಳ ಹಾವಳಿ ತಡಗೆ 8 ಕಿ.ಮೀವರೆಗೂ ಬ್ಯಾರಿಕೇಡ್ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ ಎಂದು ಮಾಹಿತಿ ನೀಡಿದರು.

ಮೊದಲನೇ ಹಂತದಲ್ಲಿ ನಂಜನಗೂಡು ತಾಲ್ಲೂಕು ವ್ಯಾಪ್ತಿಗೆ ಸೇರುವ 4 ಕಿ.ಮೀವರೆಗೆ ಬ್ಯಾರಿಕೇಡ್ ನಿರ್ಮಾಣವಾಗಲಿದೆ. ಅರಣ್ಯ ಇಲಾಖೆಯ ಭೂಮಿಯಲ್ಲಿ ವ್ಯವಸಾಯ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸದೆ,ವ್ಯವಸಾಯ ಮಾಡುತ್ತಿರುವ ರೈತರಿಗೆ ಅನುಕೂಲ ಮಾಡಿಕೊಡುವಂತೆ ಅರಣ್ಯ ಸಚಿವರಿಗೆ ಮನವರಿಕೆ ಮಾಡಿಕೊಡಲಾಗಿದೆ. ಅವರು ಅಧಿಕಾರಿಗಳಿಗೂ ಈ ಬಗ್ಗೆ ಸೂಚನೆ ನೀಡಿದ್ದಾರೆ ಎಂದು ಹೇಳಿದರು.

ತಾಲ್ಲೂಕಿನ ಹೊಸವೀಡು ಗ್ರಾಮದಲ್ಲಿ ₹ 5 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ಬಸ್ ನಿಲ್ದಾಣ, ಕಂದೇಗಾಲದಲ್ಲಿ ₹ 25 ಲಕ್ಷದಲ್ಲಿ ನಿರ್ಮಾಣವಾಗಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನ, ವೆಂಕಟಾಚಲಪುರದಲ್ಲಿ ₹ 20 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಅಂಬೇಡ್ಕರ್ ಭವನ ಮತ್ತು ಯಡಿಯಾಲ ಗ್ರಾಮದಲ್ಲಿ ಅಂಗನವಾಡಿ ಕಟ್ಟಡವನ್ನು ಇದೇ ವೇಳೆ ಶಾಸಕರು ಉದ್ಘಾಟಿಸಿದರು.

ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಕೆ.ಮಾರುತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಕಂಠ ನಾಯಕ, ಮುಖಂಡರಾದ ನಾಗೇಶ್ ರಾಜ್, ಕಗ್ಗಲಿಪುರ ಮಹದೇವು, ದೇಬೂರು ಅಶೋಕ್, ಗೋವಿಂದರಾಜು, ಬೆಳಲೆ ಮಹೇಶ್, ಅಭಿನಂದನ್ ಪಟೇಲ್, ಹಾಡ್ಯ ಜಯರಾಮ, ಹರೀಶ್, ಲೋಕೋಪಯೋಗಿ ಇಲಾಖೆ ಎಇಇ ರಮೇಶ್, ಎಇ ಬಸವರಾಜು, ನಿರ್ಮಿತಿ ಕೇಂದ್ರದ ಎಇಇ ಮಂಜುನಾಥ್, ಎಇ ಯಶ್ವಂತ್, ಬಂಡಿಪುರ ಅರಣ್ಯ ವಿಭಾಗದ ನಿರ್ದೇಶಕ ಪ್ರಭಾಕರನ್, ಎಸಿಎಫ್ ಸುರೇಶ್, ಪರಮೇಶ್, ವಲಯ ಅರಣ್ಯಾಧಿಕಾರಿ ಹನುಮಂತಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-38-927383628

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.