ನಂಜನಗೂಡು: ‘ರಂಗೋಲಿ ಭಾರತೀಯ ಸಂಸ್ಕೃತಿಯ ಪ್ರತೀಕ, ರಂಗೋಲಿ ಸ್ಪರ್ಧೆ ಆಯೋಜಿಸುವ ಮೂಲಕ ಸಾಂಪ್ರದಾಯಿಕ ಕಲೆಗೆ ಪ್ರೋತ್ಸಾಹ ನೀಡಲಾಗಿದೆ’ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.

ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಶುಕ್ರವಾರ ಗರಳಪುರಿ ಉತ್ಸವದ ಅಂಗವಾಗಿ ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯಿಂದ ಆಯೋಜಿಸಿದ್ದ ರಂಗೋಲಿ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ರಂಗೋಲಿ ಸ್ಪರ್ಧೆಗಳು ಭಾರತೀಯ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಜೊತೆಗೆ, ಮಹಿಳೆಯರ ಸೃಜನಶೀಲತೆ ಪ್ರೋತ್ಸಾಹಿಸುವ, ಸಮುದಾಯದ ಬಾಂಧವ್ಯವನ್ನು ವೃದ್ಧಿಸಿ ಸೌಹಾರ್ದ ಮೂಡಿಸುವಂತಹ ಸುಂದರ ಕಲೆ’ ಎಂದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಮಾತನಾಡಿ, ‘ಶಾಸಕ ದರ್ಶನ್ ಧ್ರುವನಾರಾಯಣ ಅವರು ಗರಳಪುರಿ ಉತ್ಸವ ರೂಪಿಸುವ ಮೂಲಕ ಎಲ್ಲಾ ಸಮುದಾಯದ ಜನರನ್ನು ಸಾಂಸ್ಕೃತಿಕವಾಗಿ ಒಗ್ಗೂಡಿಸಲು ಪ್ರಯತ್ನಿಸಿದ್ದಾರೆ’ ಎಂದು ಹೇಳಿದರು.

ಗ್ಯಾರಂಟಿ ಸಮಿತಿ ತಾಲ್ಲೂಕು ಅಧ್ಯಕ್ಷ ಕೆ.ಮಾರುತಿ ಮಾತನಾಡಿ, ಸ್ಪರ್ಧೆಯಲ್ಲಿ ಸುಮಾರು 6 ಸಾವಿರ ಮಹಿಳೆಯರು ಉತ್ಸಾಹದಿಂದ ಭಾಗವಹಿಸಿದ್ದಾರೆ. ಅವರಲ್ಲಿ 50 ಮಂದಿಯನ್ನು ಅಂತಿಮಗೊಳಿಸಿ ಅಂತಿಮ ಸ್ಪರ್ಧೆ ನಡೆಸಲಾಗಿದೆ, ಜಯಗಳಿಸಿದರಿಗೆ ಉತ್ಸವದ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಣೆ ಮಾಡಲಾಗುವುದು’ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಶಿವರಾಜು, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ಕುರಹಟ್ಟಿ ಮಹೇಶ್, ಸಿ.ಎಂ.ಶಂಕರ್, ಶ್ರೀಕಂಠ ನಾಯಕ, ನಗರಸಭೆ ಮಾಜಿ ಅಧ್ಯಕ್ಷ ಶ್ರೀಕಂಠಸ್ವಾಮಿ, ಮುಖಂಡರಾದ ಹಾಡ್ಯ ಜಯರಾಮ್, ಹರೀಶ್, ಎನ್.ಎಂ. ಮಂಜುನಾಥ್, ಶಶಿರೇಖಾ, ಗಾಯತ್ರಿ, ಕಳಲೆ ರಾಜೇಶ್, ಎನ್.ಎಸ್.ಮಾದಪ್ಪ, ಗೋವಿಂದರಾಜು, ನಾಗರಾಜು, ಉಪ್ಪಿನಹಳ್ಳಿ ಶಿವಣ್ಣ, ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯಕುಮಾರ್, ತಾ.ಪಂ. ಇಒ ಜೆರಾಲ್ಡ್ ರಾಜೇಶ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-38-1324822132

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.