ನಂಜನಗೂಡು: ‘ನವಿಲೂರು, ಮುದ್ದ ಹಳ್ಳಿ, ಸೂರಹಳ್ಳಿ ಮೂಲಕ ಹಲ್ಲರೆಗೆ ಸೇರುವ ಮುಖ್ಯರಸ್ತೆಯ ಅಭಿವೃದ್ಧಿ ಕಾಮಗಾರಿಗೆ ₹4 ಕೋಟಿ 57 ಲಕ್ಷ ವೆಚ್ಚ ದಲ್ಲಿ ಚಾಲನೆ ನೀಡಲಾಗಿದೆ’ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.

ತಾಲ್ಲೂಕಿನ ದೇವಿರಮ್ಮನಹಳ್ಳಿ, ದೇವರಸನಹಳ್ಳಿ, ಕೆಬ್ಬೆಪುರ, ನವಿಲೂರು, ಮಸಗೆ ಗ್ರಾಮಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

‘ಕಳೆದ 30 ವರ್ಷಗಳಿಂದ ರಸ್ತೆ ಅಭಿವೃದ್ಧಿ ಕಾಣದೆ ತೀವ್ರ ಹಳ್ಳ ಕೊಳ್ಳಗಳು ಉಂಟಾಗಿ, ಸಂಚಾರಕ್ಕೆ ತೀವ್ರ ತೊಂದರೆಯಾಗಿತ್ತು, ಗ್ರಾಮಸ್ಥರು ರಸ್ತೆಯನ್ನು ಅಭಿವೃದ್ಧಿಪಡಿಸುವಂತೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದ್ದರು, ಗ್ರಾಮಸ್ಥರ ಮನವಿಯ ಮೇರೆಗೆ 2.15 ಕಿ.ಮೀ ಉದ್ದ ಮುಖ್ಯರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು’ ಎಂದರು.

‘ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ದೇವಿರಮ್ಮನಹಳ್ಳಿಯ ಸಾಮಾನ್ಯ ವರ್ಗದ ಬೀದಿಯಲ್ಲಿ ₹65 ಲಕ್ಷ, ದೇವರಸನಹಳ್ಳಿಯ ಸಾಮಾನ್ಯ ವರ್ಗದ ಬೀದಿಯಲ್ಲಿ ₹25 ಲಕ್ಷ, ಮಸಗೆಯಲ್ಲಿ ₹30 ಲಕ್ಷ ವೆಚ್ಚದಲ್ಲಿ ಸಾಮಾನ್ಯ ವರ್ಗದ ಬೀದಿಯಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಯನ್ನೂ ನಡೆಸಲಾಗುವುದು. ಒಟ್ಟಾರೆ ₹6 ಕೋಟಿ 2 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ’ ಎಂದರು.

ಮುಂಕಡ ಕಳಲೆ ಕೇಶವಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುರಹಟ್ಟಿ ಕೆ.ಜಿ.ಮಹೇಶ್, ಎಸ್ಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಪ್ಪಿನಹಳ್ಳಿ ಶಿವಣ್ಣ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಕರಳಾಪುರ ನಾಗರಾಜ್, ದೇಬೂರ ಅಶೋಕ್, ಕಳಲೆ ರಾಜೇಶ್, ಮುದ್ದುಮಾದಶೆಟ್ಟಿ, ತಗಡೂರುನಾಯಕ, ರಘು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-38-522208263

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.