ನಂಜನಗೂಡು: ದೇವಾಲಯಗಳು ದೇಶದಲ್ಲಿ ಭಾರತೀಯ ಸಂಸ್ಕೃತಿ, ಕಲೆಯ ಕೇಂದ್ರಗಳಾಗಿದ್ದು, ಮನುಷ್ಯನಿಗೆ ದೈವಿಕ ಶಕ್ತಿಯ ಜೊತೆಗೆ ಮಾನಸಿಕ ಶಾಂತಿ, ನೆಮ್ಮದಿ, ಆಶ್ರಯ ನೀಡುವ ತಾಣಗಳಾಗಿವೆ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ವಳಗೆರೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶನೀಶ್ವರಸ್ವಾಮಿ ದೇವಾಲಯದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

‘ಮನುಷ್ಯನಿಗೆ ದೇವರಲ್ಲಿ ವಿಶ್ವಾಸವಿದ್ದಲ್ಲಿ ಮಾತ್ರ ಅವನು ಮಾನಸಿಕವಾಗಿ ಸುಖ, ಶಾಂತಿ, ಸಮೃದ್ಧಿಯಿಂದ ಇರಲು ಸಾಧ್ಯ. ನಮ್ಮ ಹಿರಿಯರು ಪ್ರಕೃತಿ ಹರಿಯುವ ನೀರನ್ನು ದೇವರೆಂದು ಪೂಜಿಸುತ್ತಾ ಬಂದಿದ್ದಾರೆ. ಪ್ರಕೃತಿ ಮನುಷ್ಯನ ಜೀವನ, ಮನಸ್ಸನ್ನು, ಪರಿಶುದ್ಧವಾಗಿಸುತ್ತದೆ. ನಮ್ಮ ಹಿರಿಯರು ದೇವರ ಹೆಸರಿನಲ್ಲಿ ಮನುಷ್ಯನನ್ನು ಪ್ರಕೃತಿಯಲ್ಲಿ ಲೀನವಾಗಿಸುವ ಪ್ರಯತ್ನ ನಡೆಸಿದ್ದಾರೆ. ದೇವರ ಪೂಜೆ ಮಾಡುವುದು ಹೊರಗಿನ ಐಶ್ವರ್ಯ ಶ್ರೀಮಂತಿಕೆಯನ್ನು ತೋರ್ಪಡಿಸಲು ಅಲ್ಲ, ನಮ್ಮ ಆಂತರಿಕ ಶಾಂತಿ ಮತ್ತು ನೆಮ್ಮದಿಗಾಗಿ’ ಎಂದರು.

ಶಾಸಕ ಮಾಧುಸ್ವಾಮಿ, ‘ನಾವೆಲ್ಲರೂ ಬಸವಣ್ಣನವರ ಧರ್ಮದ ಸಂದೇಶಗಳನ್ನು ಅರ್ಥೈಸಿಕೊಳ್ಳಬೇಕು, ಪ್ರಮುಖವಾಗಿ ಭಕ್ತಿಯಿಂದ ದೇವರನ್ನು ಪೂಜಿಸಬೇಕೆ ಹೊರತು, ಭಯದಿಂದ ಪೂಜಿಸಬಾರದು. ನಮ್ಮ ತನು ಮನವನ್ನು ಸಂತೈಸುವಂತೆ ದೇವರನ್ನು ಪೂಜಿಸು ಎಂದು ಧರ್ಮ ಹೇಳುತ್ತದೆ. ನಾವೆಲ್ಲರೂ ಒಂದಾಗಿ ಸಹಬಾಳ್ವೆ ನಡೆಸಬೇಕು’ ಎಂದರು.

ದೇವಾಲಯದ ಉದ್ಘಾಟನೆಯ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಾಜಿ ಶಾಸಕ ಬಿ.ಹರ್ಷವರ್ಧನ್ ಭೇಟಿ ನೀಡಿದ್ದರು.

ಸಮಾರಂಭದಲ್ಲಿ ದೇವನೂರು ಮಠದ ಮಹಾಂತ ಸ್ವಾಮೀಜಿ, ಕನಕಪುರ ದೇಗುಲ ಮಠದ ಮುಮ್ಮಡಿ ನಿರ್ವಾಣ ಸ್ವಾಮೀಜಿ, ಶಾಸಕ ಎಚ್.ಎಂ.ಗಣೇಶ್ ಪ್ರಸಾದ್, ಕಾಂಪೋಸ್ಟ್ ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ಎಸ್. ಮಹದೇವಯ್ಯ, ತಾಲ್ಲೂಕು ವೀರಶೈವ ಮಹಾಸಭಾ ಅಧ್ಯಕ್ಷ ಎಸ್.ಎಂ. ಕೆಂಪಣ್ಣ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಎಸ್.ಮಹದೇವಪ್ಪ, ರೈತ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆ ಹುಂಡಿ ಭಾಗ್ಯರಾಜ್ ಸೇರಿದಂತೆ ಶನೇಶ್ವರ ಸ್ವಾಮಿ ಸೇವಾ ಟ್ರಸ್ಟ್ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-38-615751560

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.