ನಂಜನಗೂಡು: ಕೈಗಾರಿಕಾ ಪ್ರದೇಶ ಅಭಿವೃದ್ಧಿಪಡಿಸಲು ಜಮೀನು ನೀಡಿರುವ ರೈತ ಕುಟುಂಬದ ಸದಸ್ಯರಿಗೆ ಉದ್ಯೋಗ ನೀಡದೆ ವಂಚಿಸಲಾಗುತ್ತಿದೆ ಎಂದು ಆರೋಪಿಸಿ ಸಂತ್ರಸ್ತ ಕುಟುಂಬಗಳ ರೈತರು ತಾಲ್ಲೂಕಿನ ತಾಂಡ್ಯದ ಕೈಗಾರಿಕಾ ಪ್ರದೇಶದಲ್ಲಿರುವ ಯುನೈಟೆಡ್ ಬ್ರುವರೀಸ್(ಯುಬಿ) ಕಾರ್ಖಾನೆ ಮುಂಭಾಗ ಪ್ರತಿಭಟನೆ ನಡೆಸಿದರು.

ಸೋಮವಾರ ಬೆಳಿಗ್ಗೆ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಮದ್ಯ ತಯಾರಿಕಾ ಕಾರ್ಖಾನೆ ಮುಂಭಾಗ ಪ್ರತಿಭನೆ ಆರಂಭಿಸಿದ ರೈತ ಕುಟುಂಬದವರು ಮಾತನಾಡಿ, ‘ಈ ಪ್ರದೇಶದಲ್ಲಿ ಖಾಸಗಿ ಕಾರ್ಖಾನೆ ನಿರ್ಮಾಣಕ್ಕಾಗಿ 62 ಎಕರೆ ಭೂಮಿಯನ್ನು ಪಡೆದುಕೊಂಡಿದ್ದಾರೆ. ರೈತರಿಂದ ಜಮೀನು ವಶಕ್ಕೆ ಪಡೆಯುವ ಮುನ್ನ ಸಂತ್ರಸ್ತ ಕುಟುಂಬದವರಿಗೆ ಕಾಯಂ ಉದ್ಯೋಗ ಕೊಡಿಸುವುದಾಗಿ ಕೆಐಎಡಿಬಿ ಅಧಿಕಾರಿಗಳು ಒಪ್ಪಂದ ಮಾಡಿ ಕೊಂಡಿದ್ದರು’ ಎಂದು ಆರೋಪಿಸಿದರು.

‘ಕಾರ್ಖಾನೆ ಆರಂಭಗೊಂಡು 14 ವರ್ಷಗಳಾಗಿದ್ದರೂ ಭೂಮಿ ಕಳೆದುಕೊಂಡಿರುವ ರೈತ ಕುಟುಂಬಗಳ ಸದಸ್ಯರಿಗೆ ಈವರೆಗೂ ಉದ್ಯೋಗ ನೀಡಲು ಮುಂದಾಗಿಲ್ಲ. ಹೀಗಾಗಿ ರೈತರು ಹೋರಾಟದ ಹಾದಿಗೆ ಮುಂದಾಗಿದ್ದಾರೆ. ತಕ್ಷಣ ಜಿಲ್ಲಾಧಿಕಾರಿ ಮಧ್ಯಪ್ರವೇಶ ಮಾಡಿ ಕೆಐಎಡಿಬಿ ಅಧಿಕಾರಿಗಳ ಸಮ್ಮುಖದಲ್ಲಿ ಕಾರ್ಖಾನೆ ಆಡಳಿತ ಮಂಡಳಿಯವರ ಸಭೆ ಕರೆದು ಭೂಮಿ ಕಳೆದುಕೊಂಡಿರುವ ರೈತರಿಗೆ ನ್ಯಾಯ ದೊರಕಿಸಿ ಕೊಡಬೇಕು, ಇಲ್ಲವಾದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು’ ಎಂದು ಎಚ್ಚರಿಸಿದರು.

ಪ್ರತಿಭಟನಕಾರರು ಕೆಲ ಸಮಯ ಕೈಗಾರಿಕಾ ಪ್ರದೇಶದ ಮುಖ್ಯರಸ್ತೆಯಲ್ಲಿ ವಾಹನ ಸಂಚಾರಕ್ಕೆ ತಡೆಯೊಡ್ಡಿ ಪ್ರತಿಭಟನೆಗೆ ಮುಂದಾಗಿದ್ದರಿಂದ ವಾಹನ ಸಂಚಾರಕ್ಕೆ ತೊಡಕಾಗಿತ್ತು. ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ಪ್ರತಿಭಟನಾನಿರತರ ಮನವೊಲಿಸಿ ಧರಣಿ ಹಿಂತೆಗೆದುಕೊಳ್ಳುವಂತೆ ನೋಡಿಕೊಳ್ಳುವ ಮೂಲಕ ವಾಹನಗಳ ಸುಗಮ ಸಂಚಾರಕ್ಕೆ ನೆರವಾದರು.

ಪ್ರತಿಭಟನೆಯಲ್ಲಿ ಶಶಿಕುಮಾರ್, ಟಿ.ಜೆ.ಮಹದೇವ್, ಕೆಲ್ಲೂಪುರ ರವಿ, ಶ್ರೀಕಂಠ, ಕೆಂಪಿಸಿದ್ಧನಹುಂಡಿ ಹಾಗೂ ತಾಂಡವಪುರ ಗ್ರಾಮಗಳ 30ಕ್ಕೂ ಹೆಚ್ಚು ರೈತರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-38-1107403420

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.