ನಂಜನಗೂಡು: ‘ಉಪ್ಪಾರ ಸಮುದಾಯ ಆರ್ಥಿಕವಾಗಿ, ರಾಜಕೀಯವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದೆ. ಹೀಗಾಗಿ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಒದಗಿಸಲು ಶಾಸಕ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ತಾಲೂಕು ಉಪ್ಪಾರ ಸಮುದಾಯದ ಜಿಲ್ಲಾಧ್ಯಕ್ಷ ಕರಳಾಪುರ ನಾಗರಾಜು ಆಗ್ರಹಿಸಿದರು.

ನಗರದ ಶ್ರೀಕಂಠೇಶ್ವರ ದೇವಾಲಯದ ಬಳಿ ಇರುವ ಉಪ್ಪಾರ ಸಮುದಾಯದಲ್ಲಿ ಸಮುದಾಯದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

‘ಉಪ್ಪಾರ ಸಮುದಾಯ ಶಾಸಕ ಪುಟ್ಟರಂಗಶೆಟ್ಟಿ ಅವರ ಮಾತಿಗೆ ಬೆಲೆ ನೀಡಿ ಸಮುದಾಯದ ಶೇ 90ರಷ್ಟು ಜನರು ಕಾಂಗ್ರೆಸ್ ಬೆಂಬಲಿಸುತ್ತಾ ಬಂದಿದ್ದಾರೆ. ಅವರಿಗೆ ನೂತನ ಸಚಿವ ಸಂಪುಟದಲ್ಲಾದರೂ ಸಚಿವ ಸ್ಥಾನ ನೀಡಿ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸಲು ಮುಂದಾಗಬೇಕು’ ಎಂದು ಒತ್ತಾಯಿಸಿದರು.

‘ಧ್ರುವನಾರಾಯಣ್ ಅವರು ಕಾಂಗ್ರೆಸ್ಗೆ ಶ್ರಮಿಸಿರುವ ಸೇವೆ ಪರಿಗಣಿಸಿ ಮೈಸೂರು ಜಿಲ್ಲೆಯಿಂದ ಶಾಸಕ ದರ್ಶನ್ ಧ್ರುವನಾರಾಯಣ್ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದರು.

ತಾ.ಪಂ ಮಾಜಿ ಸದಸ್ಯ ಎಚ್ಎಸ್ ಮೂಗಶೆಟ್ಟಿ ಮಾತನಾಡಿದರು. ಕನಕ ನಗರ ಮಹದೇವು, ಹೆಮ್ಮರಗಾಲ ಸೋಮಣ್ಣ, ಬಾಲಚಂದ್ರು, ಗೋವಿಂದರಾಜು, ಶ್ರೀನಿವಾಸ್, ಮುದ್ದುಮಾದಶೆಟ್ಟಿ, ಗಜೇಂದ್ರ, ಸಿದ್ದಶೆಟ್ಟಿ, ನಾಗರಾಜು, ಯೋಗೀಶ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-38-1955113403

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.