ನಂಜನಗೂಡು: ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು, ವಿಕಸಿತ ಭಾರತ ನಿರ್ಮಿಸುವ ಸಲುವಾಗಿ ದೊಡ್ಡ ಸಂಖ್ಯೆಯಲ್ಲಿ ಸದಸ್ಯತ್ವ ನೋಂದಣಿ ಮಾಡಿ ಎಂದು ವರುಣ ಕ್ಷೇತ್ರದ ಬಿಜೆಪಿ ಸದಸ್ಯತ್ವ ಸಂಚಾಲಕ ಮಹದೇವಸ್ವಾಮಿ ಹೇಳಿದರು.

ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ಬುಧವಾರ ವರುಣ ಕ್ಷೇತ್ರದ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮೋದಿ ಅವರು ಭಾರತವನ್ನು ವಿಶ್ವಗುರುವನ್ನಾಗಿ ರೂಪಿಸುವ ಸಲುವಾಗಿ ಹಗಲಿರುಳು ದುಡಿಯುತ್ತಿದ್ದಾರೆ. ಅವರ ಕೈ ಬಲ ಪಡಿಸಲು ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಸದೃಢವಾಗಿ ಕಟ್ಟಬೇಕಿದೆ. ಪಕ್ಷಕ್ಕೆ ಹೆಚ್ಚು ಸದಸ್ಯರ ನೋಂದಣಿ ಮಾಡುವುದರಿಂದ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಬಲಗೊಳ್ಳಲು ಸಾಧ್ಯ, ಕಾರ್ಯಕರ್ತರು ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಪಕ್ಷ ಸಂಘಟನೆಯ ಹಿತದೃಷ್ಠಿಯಿಂದ ವರುಣಾ ಕ್ಷೇತ್ರದಲ್ಲಿ 2 ಲಕ್ಷಕ್ಕಿಂತಲೂ ಅಧಿಕ ಸದಸ್ಯತ್ವ ನೋಂದಣಿ ಗುರಿ ಹೊಂದಲಾಗಿದೆ ಎಂದರು.

ಪ್ರತಿಯೊಬ್ಬ ಕಾರ್ಯಕರ್ತರೂ ಪಕ್ಷಕ್ಕಾಗಿ ಕೆಲಸ ಮಾಡಿ ಪ್ರತಿ ಬೂತ್‍ನಲ್ಲಿ 300ಕ್ಕೂ ಹೆಚ್ಚಿನ ಯುವ ಮತದಾರರನ್ನು ಪಕ್ಷಕ್ಕೆ ಸೆಳೆದು ಸದಸ್ಯತ್ವ ನೋಂದಣಿ ಮಾಡಿಸಬೇಕು. ಪ್ರತಿ ಮನೆ ಮನೆಗೆ ತೆರಳಿ ಪಕ್ಷದ ಸಾಧನೆ, ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ಮೂಲಕ ಹೆಚ್ಚು ಸದಸ್ಯತ್ವ ನೋಂದಣಿ ಮಾಡಿಸಬೇಕು ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಿದ್ದಪ್ಪ, ಕಾರ್ಯದರ್ಶಿ ವಾಸು, ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಮಾದಪ್ಪ, ವೆಂಕಟೇಶ್, ತುಂಬಲ ನಂದೀಶ್, ಅಂಕಪ್ಪ, ನಾಗರಾಜ್, ಡಿ.ಮಹೇಶ್, ರಾಜೇಶ್, ಕುಮಾರ್, ಕಿರಗುಂದ ಚಿಕ್ಕಸ್ವಾಮಿ, ಬಿಳಿಗೆರೆಸೋಮಣ್ಣ, ಸಿದ್ದಲಿಂಗಸ್ವಾಮಿ, ಗುರುಸ್ವಾಮಿ, ಚಂದ್ರು, ಚರಣ್, ಚಂದು, ಬಸವರಾಜ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.