ಬೆಟ್ಟದಪುರ: ‘ದೇಶದ ಸಂಪನ್ಮೂಲಗಳ ಸಂರಕ್ಷಣೆ, ಸಾರ್ವಜನಿಕ ಹಣದ ಜವಾಬ್ದಾರಿಯುತ ಬಳಕೆ ಹಾಗೂ ಭಾರತದ ಆರ್ಥಿಕ ಸ್ಥಿರತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಸಲಹೆಯನ್ನು ಕಾಂಗ್ರೆಸ್ ರಾಜಕೀಯ ಟೀಕೆಗೆ ಬಳಸಿಕೊಳ್ಳುತ್ತಿರುವುದು ಖಂಡನೀಯ’ ಎಂದು ಬಿಜೆಪಿ ಮೈಸೂರು ಗ್ರಾಮಾಂತರ ಒಬಿಸಿ ಘಟಕದ ಅಧ್ಯಕ್ಷ ಎಂ.ಎಂ. ರಾಜೇಗೌಡ ದೂರಿದ್ದಾರೆ.

‘ದೇಶ ಮೊದಲು, ರಾಜಕೀಯ ನಂತರ ಎಂಬ ನಿಲುವಿನೊಂದಿಗೆ ಕೇಂದ್ರ ಸರ್ಕಾರ ದೀರ್ಘಕಾಲೀನ ಆರ್ಥಿಕ ಶಿಸ್ತು, ಅಭಿವೃದ್ಧಿ ಹಾಗೂ ಭವಿಷ್ಯದ ಪೀಳಿಗೆಯ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಹಲವು ಕ್ರಮಗಳನ್ನು ಜಾರಿಗೆ ತರುತ್ತಿದೆ. ಇಂತಹ ಸಂದರ್ಭದಲ್ಲಿ ರಾಷ್ಟ್ರದ ಹಿತದ ಬಗ್ಗೆ ಪ್ರಧಾನಿ ನೀಡಿದ ಕಾಳಜಿಯ ಸಂದೇಶವನ್ನು ಕಾಂಗ್ರೆಸ್ ರಾಜಕೀಯ ಲಾಭಕ್ಕಾಗಿ ತಿರುಚಿ ಜನರ ಗಮನ ಸೆಳೆಯಲು ಯತ್ನಿಸುತ್ತಿದೆ’ ಎಂದು ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.

‘ಕೇಂದ್ರ ಸರ್ಕಾರ ಕಳೆದ ಕೆಲವು ವರ್ಷಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ, ರೈತರ ಕಲ್ಯಾಣ, ಡಿಜಿಟಲ್ ಇಂಡಿಯಾ, ಆತ್ಮನಿರ್ಭರ, ಸ್ಟಾರ್ಟ್ಅಪ್ ಉತ್ತೇಜನ ಹಾಗೂ ವಿದೇಶಿ ಹೂಡಿಕೆ ಸೆಳೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಗಳನ್ನು ಇಟ್ಟಿದೆ. ಇದರ ಪರಿಣಾಮವಾಗಿ ಭಾರತ ಜಾಗತಿಕ ಆರ್ಥಿಕ ವೇದಿಕೆಯಲ್ಲಿ ವಿಶ್ವಾಸಾರ್ಹ ಮತ್ತು ವೇಗವಾಗಿ ಬೆಳೆಯುತ್ತಿರುವ ರಾಷ್ಟ್ರವಾಗಿ ಹೊರಹೊಮ್ಮಿದೆ. ದೇಶದ ಸಂಪನ್ಮೂಲಗಳ ಸಂರಕ್ಷಣೆ ಎಂಬುದು ಕೇವಲ ಸರ್ಕಾರದ ಹೊಣೆಗಾರಿಕೆ ಮಾತ್ರವಲ್ಲ. ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಆಗಿದೆ. ಮೋದಿ ಅವರ ಕರೆ ರಾಜಕೀಯ ಉದ್ದೇಶದ್ದಲ್ಲ’ ಎಂದು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-38-2091774058

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.