ಮೈಸೂರು: ‘ಜಿಲ್ಲೆಯ 20 ಪರೀಕ್ಷಾ ಕೇಂದ್ರಗಳಲ್ಲಿ ಮೇ 4ರಂದು ‘ನೀಟ್’ (ಯುಜಿ) ಪರೀಕ್ಷೆ ನಡೆಯಲಿದ್ದು, ಯಾವುದೇ ಲೋಪ ಉಂಟಾಗದಂತೆ ನೋಡಿಕೊಳ್ಳಬೇಕು. ಸುಗಮ ಹಾಗೂ ವ್ಯವಸ್ಥಿತವಾಗಿ ಜರುಗಲು ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಜಿಲ್ಲೆಯ ಕೇಂದ್ರಗಳಲ್ಲಿ 7,709 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದಾರೆ. ನ್ಯಾಯಯುತ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ಗಳಿಗೆ ಪ್ರವೇಶ ಪಡೆಯುವವರಿಗೆ ಪರೀಕ್ಷೆ ನಡೆಸಲಾಗುತ್ತದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ)ಯ ಮಾರ್ಗಸೂಚಿ ಪ್ರಕಾರ ಕ್ರಮ ಜರುಗಿಸಬೇಕು’ ಎಂದರು.

‘ಪ್ರತಿ ಪರೀಕ್ಷಾ ಕೇಂದ್ರಕ್ಕೂ ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕು’ ಎಂದು ನಿರ್ದೇಶನ ನೀಡಿದರು.

ಸಿದ್ಧಾರ್ಥನಗರದ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರಾದ ನೂತನ್ ಪುಂಜ್, ಮಿತಿಲೇಶ್ ಕುಮಾರ್ ಹಾಗೂ ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.