ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೈಸೂರು | ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು: 16 ಸರ್ಟಿಫಿಕೆಟ್ ಕೋರ್ಸ್‌

Published 7 ಮಾರ್ಚ್ 2024, 15:23 IST
Last Updated 7 ಮಾರ್ಚ್ 2024, 15:23 IST
ಅಕ್ಷರ ಗಾತ್ರ

ಮೈಸೂರು: ನಗರದ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ವಿವಿಧ ವಿಷಯಗಳ 16 ಸರ್ಟಿಫಿಕೇಟ್ ಕೋರ್ಸ್‌ಗಳನ್ನು ಈ ಶೈಕ್ಷಣಿಕ ವರ್ಷದಿಂದ ಆರಂಭಿಸಲಾಗಿದೆ.

ಕನ್ನಡ, ಇಂಗ್ಲಿಷ್, ಭೌತವಿಜ್ಞಾನ, ರಸಾಯನವಿಜ್ಞಾನ, ಗಣಕ ವಿಜ್ಞಾನ, ಗಣಿತ, ಗೃಹ ವಿಜ್ಞಾನ, ರೇಷ್ಮೆ ಕೃಷಿ, ಹಿಂದಿ ಮೊದಲಾದ ವಿಷಯಗಳಲ್ಲಿ ಕೋರ್ಸ್‌ ಲಭ್ಯವಿದೆ. ಗುರುವಾರ ನಡೆದ ಸಮಾರಂಭದಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕ ಅಪ್ಪಾಜಿ ಗೌಡ ಅವರು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ‘ಈ ಕೋಸ್‌ಗಳು ಉದ್ಯೋಗ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿವೆ’ ಎಂದರು.

‘ಕೋವಿಡ್ ನಂತರ ಶೈಕ್ಷಣಿಕ ವಲಯದಲ್ಲಿ ಮಹತ್ತರವಾದ ಬದಲಾವಣೆ ಆಗಿದೆ. ತಂತ್ರಜ್ಞಾನದ ಮೂಲಕ ಜ್ಞಾನಾರ್ಜನೆ ಪಡೆಯುವಂತಾಗಿದೆ. ಆದರೆ, ತಂತ್ರಜ್ಞಾನವನ್ನು ಸದ್ಬಳಕೆ ಮಾಡಿಕೊಳ್ಳುವ ಅಗತ್ಯ ಹೆಚ್ಚಾಗಿದೆ’ ಎಂದು ಹೇಳಿದರು.

ಪ್ರಾದೇಶಿಕ ಜಂಟಿ ನಿರ್ದೇಶಕಿ ಎ.ಎಂ.ಎಚ್‌. ವಿಜಯಲಕ್ಷ್ಮಿ ಮಾತನಾಡಿ, ‘ಯುವ ಜನರು ಅದರಲ್ಲೂ ಹೆಣ್ಣುಮಕ್ಕಳ ಸಮಗ್ರ ಅಭಿವೃದ್ಧಿಗೆ ಇಂತಹ ಕೋರ್ಸ್‌ಗಳು ಉಪಯುಕ್ತವಾಗಿವೆ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ.ಎಂ.ಅಬ್ದುಲ್ ರಹಿಮಾನ್ ಮಾತನಾಡಿದರು.

ಶೈಕ್ಷಣಿಕ ಡೀನ್ ಡಾ.ಶ್ರೀಪಾದ್, ಕೆಂಡಗಣ್ಣೇಗೌಡ, ಮಮತಾ, ಐಕ್ಯುಎಸಿ ಸಂಚಾಲಕಿ ವನಿತಾ, ಸಹಾಯಕ ನಿರ್ದೇಶಕ ಎಚ್.ಎಂ.ಮಂಜುನಾಥ್, ಎ.ಬಿ.ನಾಗೇಂದ್ರ ಪ್ರಸಾದ್, ನ್ಯಾಕ್ ವಿಶೇಷ ಅಧಿಕಾರಿ ಅರುಣ್ ಕುಮಾರ್, ವ್ಯವಸ್ಥಾಪಕ ವೆಂಕಟೇಶ್, ಪರೀಕ್ಷಾ ವಿಭಾಗದ ನಿಯಂತ್ರಕ ತೋಯಜಾಕ್ಷ, ಐಕ್ಯುಎಸಿ ಸಂಚಾಲಕ ನಂದಕುಮಾರ್, ಪತ್ರಾಂಕಿತ ವ್ಯವಸ್ಥಾಪಕಿ ಮೀನಾಕ್ಷಿ ಆರ್. ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT