ಮೈಸೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ತಾವು ಎಂದು ಎಲ್ಲೂ ಹೇಳಿಲ್ಲ. ಕೆಲವು ಶಾಸಕರಷ್ಟೇ ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳಿದ್ದಾರೆ. ಹಾಗಾಗಿ, ಈ ಕುರಿತು ಮಾತನಾಡುವುದು ಅನಗತ್ಯ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ಶಾಸಕರ ವೈಯಕ್ತಿಕ ಅಭಿಪ್ರಾಯದ ಆಧಾರದ ಮೇಲೆ ವಿರೋಧ ಪಕ್ಷದ ನಾಯಕರು ಮತ್ತು ಕೆಪಿಸಿಸಿ ಅಧ್ಯಕ್ಷರ ನಡುವೆ ಒಡಕು ಉಂಟಾಗಿದೆ ಎಂದು ಬಿಂಬಿಸುವುದು ಸರಿಯಲ್ಲ ಎಂದು ಅವರು ಇಲ್ಲಿ ಬುಧವಾರ ಸುದ್ದಿಗಾರರಿಗೆ ಹೇಳಿದರು.

ಬಿಜೆಪಿಯ ದುರಾಡಳಿತವನ್ನು ಕೊನೆಗಾಣಿಸಲು ಕಾಂಗ್ರೆಸ್‌ನಲ್ಲಿ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸುತ್ತಿದ್ದಾರೆ. ಮುಖ್ಯಮಂತ್ರಿ ಯಾರು ಎಂಬ ವಿಷಯ ಹೈಕಮಾಂಡ್‌ಗೆ ಬಿಟ್ಟದ್ದು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಇದನ್ನೂ ಓದಿ– ದಲಿತರಿಗೆ ಅಧಿಕಾರ ವಂಚಿಸುವ ಪ್ರಕ್ರಿಯೆ ಶುರು: ಎನ್.ಮಹೇಶ್

‘ಮುಂದಿನ ವಿಧಾನಸಭಾ ಚುನಾವಣೆ ಹತ್ತಿರವಾದಾಗ ಸಿದ್ದರಾಮಯ್ಯ ಅವರು ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ ಎಂಬುದು ನಿರ್ಧಾರವಾಗುತ್ತದೆ. ಒಂದು ವೇಳೆ ಅವರು ವರುಣ ಕ್ಷೇತ್ರದಲ್ಲಿ ಸ್ಪರ್ಧಿಸುವುದಾದರೇ ನಾನು ಕ್ಷೇತ್ರವನ್ನು ಬಿಟ್ಟುಕೊಡುತ್ತೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.