ಇಲ್ಲಿ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಅವರು, ‘ಆ ಕ್ಷೇತ್ರದ ಉಪ ಚುನಾವಣೆ ಸಂಬಂಧ ಅಭ್ಯರ್ಥಿ ಆಯ್ಕೆ ಇನ್ನೂ ಆಗಿಲ್ಲ. ಕ್ಷೇತ್ರವನ್ನು ಎಚ್.ಡಿ. ಕುಮಾರಸ್ವಾಮಿ ಪ್ರತಿನಿಧಿಸುತ್ತಿದ್ದರು. ಈಗ ಅವರು ಸಂಸದರಾಗಿ ಗೆದ್ದು ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಅಲ್ಲಿಂದ ಅವರ ಪುತ್ರ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿಸಬೇಕು ಎಂಬ ಒತ್ತಾಯವಿದೆ’ ಎಂದರು.