ಮೈಸೂರು: ‘ಸಂಘ-ಸಂಸ್ಥೆಗಳು ಆಯಾ ಜಾತಿ-ಜನಾಂಗಕ್ಕೆ ಸೀಮಿತವಾಗದೇ ಎಲ್ಲ ಸಮುದಾಯಗಳೊಂದಿಗೆ ಬೆರೆತು ಕೆಲಸ ಮಾಡಬೇಕು. ವಿವಿಧ ಕ್ಷೇತ್ರದ ಸಾಧಕರನ್ನು ಅಭಿನಂದಿಸುವ ಜತೆಗೆ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ಕೊಡಬೇಕು’ ಎಂದು ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಸಲಹೆ ನೀಡಿದರು.

ಇಲ್ಲಿನ ಹೆಬ್ಬಾಳ ಮೊದಲ ಹಂತದಲ್ಲಿ ಎಸ್ಬಿಐ ಬ್ಯಾಂಕ್ ಎದುರಿನ ನಿವೇಶನದಲ್ಲಿ ಬಿಇಎಂಎಲ್ (ಬೆಮೆಲ್) ಒಕ್ಕಲಿಗರ ಸಂಘದಿಂದ ನೂತನ ಸಮುದಾಯ ಭವನ ನಿರ್ಮಾಣಕ್ಕೆ ಸೋಮವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

‘ಸಂಘ-ಸಂಸ್ಥೆಗಳು ಸಮಾಜ ಉಳಿವಿಗಾಗಿ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಬಿಇಎಂಎಲ್ ಒಕ್ಕಲಿಗರ ಸಂಘವು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಗೂ ಸಹಾಯ ಮಾಡುವ ಮೂಲಕ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವುದು ಶ್ಲಾಘನೀಯ. ಈ ಸಂಘದ ನಿವೇಶನದಲ್ಲಿ ಸಾಂಸ್ಕೃತಿಕ ಭವನ ನಿರ್ಮಿಸಿ ಕಡಿಮೆ ದರದಲ್ಲಿ ಸಾಮಾಜಿಕ ಕಾರ್ಯಕ್ರಮಗಳಿಗೆ ನೀಡಬೇಕು’ ಎಂದು ಹೇಳಿದರು.

ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಸೋಮೇಶ್ವರನಾಥ ಸ್ವಾಮೀಜಿ, ಶಾಸಕರಾದ ಕೆ.ಹರೀಶ್ಗೌಡ, ಜಿ.ಡಿ.ಹರೀಶ್ಗೌಡ, ಬಿಜೆಪಿ ನಗರ ಘಟಕದ ಅಧ್ಯಕ್ಷ ಎಲ್.ನಾಗೇಂದ್ರ, ವಾಗ್ಮಿ ಎಂ.ಕೃಷ್ಣೇಗೌಡ, ಮುಖಂಡರಾದ ಪೈಲ್ವಾನ್ ಶ್ರೀನಿವಾಸ್, ಪ್ರೇಮಾ ಶಂಕರೇಗೌಡ, ಬಿಇಎಂಎಲ್ ಒಕ್ಕಲಿಗರ ಸಂಘದ ಅಧ್ಯಕ್ಷ ವಾಸು, ಉಪಾಧ್ಯಕ್ಷ ಮಂಜಣ್ಣ, ಕಾರ್ಯದರ್ಶಿ ಶಂಕರ್, ಸಹ ಕಾರ್ಯದರ್ಶಿ ಭೈರೇಗೌಡ, ಕಾರ್ಯಕಾರಿ ಸಮಿತಿ ಸದಸ್ಯರಾದ ಚಲುವೇಗೌಡ, ಶಶಿಕುಮಾರ್, ರಾಧಕೃಷ್ಣ ಪ್ರಸಾದ್, ಗಿರೀಶ್, ನಾಗರಾಜ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.