ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ನರ್ಸರಿ ಶಾಲೆ ಉದ್ಘಾಟನೆ ಜ.28ರಂದು

Last Updated 27 ಜನವರಿ 2023, 13:22 IST
ಅಕ್ಷರ ಗಾತ್ರ

ಮೈಸೂರು: ‘ವೀರಶೈವ ಸಜ್ಜನ ಸಂಘ, ಸಜ್ಜನ ಶಿಕ್ಷಣ ಸಂಘದ ಆಶ್ರಯದಲ್ಲಿ ಭವಾನಿ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಿರುವ ನೂತನ ನರ್ಸರಿ ಶಾಲೆ ಹಾಗೂ ಶಾಲಾ ವಾರ್ಷಿಕೋತ್ಸವದ ಉದ್ಘಾಟನೆಯನ್ನು ಜ.28ರಂದು ಸಂಜೆ 4ಕ್ಕೆ ಹಮ್ಮಿಕೊಳ್ಳಲಾಗಿದೆ’ ಎಂದು ಸಜ್ಜನ ಶಿಕ್ಷಣ ಟ್ರಸ್ಟ್ ಉಪಾಧ್ಯಕ್ಷ ಸಾಗರ್ ಕುಮಾರ್ ತಿಳಿಸಿದರು.

ಇಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್ ಉದ್ಘಾಟಿಸಲಿದ್ದಾರೆ. ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಂ.ಶಿವಕುಮಾರ್, ವೀರಶೈವ ಸಜ್ಜನ ವೇದಿಕೆ ಅಧ್ಯಕ್ಷ ಎಸ್.ರಮಾನಂದ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಜ್ಜನ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಎಂ.ಮಹೇಶ್ ಅಧ್ಯಕ್ಷತೆ ವಹಿಸಲಿದ್ದಾರೆ’ ಎಂದರು.

ಟ್ರಸ್ಟ್ ಅಧ್ಯಕ್ಷ ಎಂ.ಮಹೇಶ್, ಎಂ.ಪಿ.ನಾಗೇಂದ್ರ ಪ್ರಸಾದ್, ಸದಾಶಿವ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT