ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯಿಂದ ತಲಾ ₹50 ಕೋಟಿ ಆಫರ್: ಸಿದ್ದರಾಮಯ್ಯ ಆರೋಪ

Published 1 ಮಾರ್ಚ್ 2024, 12:47 IST
Last Updated 1 ಮಾರ್ಚ್ 2024, 12:47 IST
ಅಕ್ಷರ ಗಾತ್ರ

ಮೈಸೂರು: ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿಯವರು ಯತ್ನಿಸುತ್ತಿದ್ದಾರೆ. ಒಬ್ಬೊಬ್ಬರಿಗೆ ₹ 50 ಕೋಟಿ ಆಫರ್ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಶುಕ್ರವಾರ ಮಾತನಾಡಿದ ಅವರು, 'ಬಿಜೆಪಿಯವರ ಆಮಿಷಕ್ಕೆ ಕಾಂಗ್ರೆಸ್ ಶಾಸಕರಾರೂ ಬಗ್ಗಿಲ್ಲ. ನಾವು ಬಹುಮತ ಪಡೆದಿದ್ದರೂ ಸರ್ಕಾರ ಅಲುಗಾಡಿಸಲು ಬಿಜೆಪಿ ಪ್ರಯತ್ನಪಡುತ್ತಿದೆ' ಎಂದು ದೂರಿದರು.

ಬಿಜೆಪಿಯವರಿಗೆ ಸರ್ಕಾರಗಳನ್ನು ಬೀಳಿಸುವುದು ಅಭ್ಯಾಸವಾಗಿ ಹೋಗಿದೆ. ಅವರು ರಾಜ್ಯದಲ್ಲಿ ನೇರವಾಗಿ ಯಾವತ್ತೂ ಅಧಿಕಾರಕ್ಕೆ ಬಂದೇ ಇಲ್ಲ. ದೇಶದ ಬೇರೆ ಬೇರೆ ಭಾಗಗಳಲ್ಲಿ ಸರ್ಕಾರ ಅತಂತ್ರಗೊಳಿಸುತ್ತಿರುವಂತೆ ಕರ್ನಾಟಕದಲ್ಲೂ ನಡೆದಿರುವುದು ಸತ್ಯ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT