ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೈಸೂರು: ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಸಲು ಸೂಚನೆ

ವಿಶೇಷ ವೆಚ್ಚ ವೀಕ್ಷಕ ಬಿ.ಮುರುಳಿ ಕುಮಾರ್ ಸೂಚನೆ
Published 6 ಏಪ್ರಿಲ್ 2024, 15:18 IST
Last Updated 6 ಏಪ್ರಿಲ್ 2024, 15:18 IST
ಅಕ್ಷರ ಗಾತ್ರ

ಮೈಸೂರು: ‘ಲೋಕಸಭೆ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸಬೇಕು. ಇದಕ್ಕೆ ಬೇಕಾಗಿರುವ ಎಲ್ಲ ಕ್ರಮಗಳನ್ನೂ ಕೈಗೊಳ್ಳಬೇಕು’ ಎಂದು ವಿಶೇಷ ವೆಚ್ಚ ವೀಕ್ಷಕ ಬಿ.ಮುರುಳಿ ಕುಮಾರ್ ಸೂಚಿಸಿದರು.’

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿಗಳು, ಸಹಾಯಕ  ಚುನಾವಣಾ ವೆಚ್ಚ ಸಮಿತಿಯ ಅಧಿಕಾರಿಗಳು ಹಾಗೂ ನೋಡಲ್ ಅಧಿಕಾರಿಗಳೊಂದಿಗೆ ಶನಿವಾರ ಸಭೆ ನಡೆಸಿದರು.

‘ಮಾದರಿ ನೀತಿಸಂಹಿತೆ ಉಲ್ಲಂಘನೆ ಆಗದಂತೆ ನೋಡಿಕೊಳ್ಳಬೇಕು. ಪ್ರತಿ ಘಟನೆಯನ್ನೂ ಸೂಕ್ಷ್ಮವಾಗಿ ಗಮನಿಸಿ ಅಭ್ಯರ್ಥಿಗಳ ವೆಚ್ಚದ ಬಗ್ಗೆ ನಿಗಾ ವಹಿಸಬೇಕು. ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಬೇಕು. ದಾಖಲೆ ರಹಿತ ನಗದು ಅಥವಾ ಇನ್ನಿತರ ವಸ್ತುಗಳು ಸಾಗಾಣಿಕೆ ಆಗದಂತೆ ನೋಡಿಕೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.

‘ದೂರುಗಳ ನೋಂದಣಿ ಮತ್ತು ಕೈಗೊಂಡ ಕ್ರಮಗಳ ಬಗ್ಗೆ ದಾಖಲೆ ನಿರ್ವಹಿಸಬೇಕು. ಎಫ್.ಎಸ್.ಟಿ., ಎಸ್.ಎಸ್.ಟಿ., ವಿ.ವಿ.ಟಿ. ಹಾಗೂ ಇನ್ನಿತರ ತಂಡಗಳು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳ ಚುನಾವಣಾ ವೆಚ್ಚ ನಿರ್ವಹಿಸಲು ನೇಮಕವಾಗಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು’ ಎಂದರು.

ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಚುನಾವಣೆಗೆ ಮಾಡಿಕೊಂಡಿರುವ ವ್ಯವಸ್ಥೆಗಳ ಬಗ್ಗೆ ಮಾಹಿತಿ ನೀಡಿದರು.

ಹುಣಸೂರು, ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ವೆಚ್ಚ ವೀಕ್ಷಕ ಎ. ಸುರೇಶ್, ಚಾಮುಂಡೇಶ್ವರಿ, ಚಾಮರಾಜ, ಕೃಷ್ಣರಾಜ ಹಾಗೂ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ವೆಚ್ಚ ವೀಕ್ಷಕ ಯೊಗೇಶ್ ಮಿಶ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯಿತ್ರಿ, ಎಸ್ಪಿ ಸೀಮಾ ಲಾಟ್ಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT