ಸರ್ವೆ ಸಂ. 189ರ 3 ಎಕರೆ 16 ಗುಂಟೆ ಸರ್ಕಾರಿ ಭೂಮಿಯಲ್ಲಿ 1 ಎಕರೆ 24 ಗುಂಟೆಯನ್ನು ಮಹದೇವಪ್ಪ ಹಾಗೂ ಕುಳ್ಳಪ್ಪನ ಒತ್ತುವರಿ ಮಾಡಿದ ಬಗ್ಗೆ ಗ್ರಾಮಸ್ಥರು ದೂರು ನೀಡಿದ್ದು, ತಹಶೀಲ್ದಾರ್ ನೇತೃತ್ವದಲ್ಲಿ ಅದನ್ನು ತೆರವುಗೊಳಿಸಲಾಗಿತ್ತು. ಆದರೆ, ಅವರು ಮತ್ತೆ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದರು. ಈ ಬಗ್ಗೆ ತಹಶೀಲ್ದಾರ್ ತಿ.ನರಸೀಪುರದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ಅಲ್ಲಿ ಭಾಗಶಃ ವಿಚಾರಣೆ ಬಳಿಕ ವಿಶೇಷ ನ್ಯಾಯಾಲಯಕ್ಕೆ ಪ್ರಕರಣ ವರ್ಗಾಯಿಸಲಾಗಿತ್ತು.