ಮೈಸೂರು: ಸೆಪ್ಟಂಬರ್ 21ರಿಂದ ಕೇವಲ ಶಾಲೆಗಳು ತೆರೆಯಲಿದೆ. ಆದರೆ ತರಗತಿಗಳು ಪ್ರಾರಂಭವಾಗುವುದಿಲ್ಲಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸೆ. 30ರೊಳಗೆ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಮುಗಿಯಬೇಕು. ಕೇಂದ್ರದ ಗ್ರೀನ್ ಸಿಗ್ನಲ್ ಬರುವವರೆಗೂ ತರಗತಿಗಳ ಆರಂಭ ಇಲ್ಲ. ಕೇವಲ ಒಂದು ಅವಧಿಯ ಶುಲ್ಕವನ್ನುಮಾತ್ರ ಖಾಸಗಿ ಶಾಲೆ ಪಡೆಯಬೇಕು. ಒಂದು ವೇಳೆ ಸಮಸ್ಯೆ ಆದರೆ ಡಿಡಿಪಿಐ, ಬಿಇಒ ಈ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ. ಅವರಿಗೆ ಈಗಾಗಲೇ ಸರ್ಕಾರದಿಂದ ಸೂಚನೆ ಕೊಟ್ಟಿದ್ದೇವೆ. ಯಾವುದೇ ಪೋಷಕರಿಗೆ ಇದರಿಂದ ಸಮಸ್ಯೆ ಆದರೆ ಬಿಇಒ ಅವರನ್ನು ಸಂಪರ್ಕಿಸಿ ಎಂದು ಹೇಳಿದರು.

ಖಾಸಗಿ ಶಾಲೆಯಿಂದ ಸರ್ಕಾರಿ ಶಾಲೆಯತ್ತ ಮಕ್ಕಳ ವರ್ಗಾವಣೆ ವಿಚಾರವಾಗಿ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಸಕಾರಾತ್ಮಕ ಬೆಳವಣಿಗೆ ಆಗುತ್ತಿದೆ. ಪೋಷಕರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಾತಿ ಮಾಡುತ್ತಿದ್ದಾರೆ. ಎಷ್ಟೇ ಮಕ್ಕಳು ಬಂದರು ಅವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುತ್ತೇವೆ. ಖಾಸಗಿ ಶಾಲೆಯಿಂದ ಟಿಸಿ ಕೊಡದಿದ್ರೆ ಬಿಇಒಯಿಂದ ಕೊಡಿಸುವ ವ್ಯವಸ್ಥೆ ಮಾಡುತ್ತೇವೆ ಎಂದರು.

ಇದನ್ನೂ ಓದಿ:PV Web Exclusive | ಶಾಲೆಯ ಕದ ‘ಇಷ್ಟೇ’ ತೆರೆಯಲು ಮೂರೇ ದಿನ ಬಾಕಿ!

ಹೋದಲ್ಲೆಲ್ಲ ಶಾಲೆ ಯಾವಾಗ ಶುರುವಾಗುತ್ತೆ ಎಂದು ಮಕ್ಕಳು ಕೇಳುತ್ತಿದ್ದಾರೆ. ಆದರೆ ಪೋಷಕರು ಮಾತ್ರ ಸಾಕಷ್ಟು ಆತಂಕದಲ್ಲಿ ಇದ್ದಾರೆ. ಇದನ್ನು ನಿವಾರಿಸುವ ಕೆಲಸ ನಮ್ಮ ಇಲಾಖೆ ಮಾಡಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅಂತಹ ಯಾವುದೇ ಸಾಧ್ಯತೆಗಳು ರಾಜ್ಯದಲ್ಲಿ ಇಲ್ಲ. ಶೇ.100ಕ್ಕೆ ನೂರರಷ್ಟು ಯಡಿಯೂರಪ್ಪನವರೇ ಸಿಎಂ ಆಗಿರ್ತಾರೆ. ಸಚಿವ ಸಂಪುಟ ವಿಸ್ತರಣೆ ವಿಚಾರ ಸಿಎಂ ಪರಮಾಧಿಕಾರ. ಆ ಬಗ್ಗೆ ಅವರೇ ತೀರ್ಮಾನ ತೆಗೆದುಕೊಂಡು ಕ್ರಮ ಕೈಗೊಳ್ತಾರೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.