ಮೈಸೂರು: ‘ರಾಜ್ಯ ಸರ್ಕಾರದ ಮಹತ್ವದ ಪಂಚ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ’ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಎಸ್.ಅರುಣ್ ಕುಮಾರ್ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಹಾಗೂ ಮೈಸೂರು ತಾಲ್ಲೂಕು ಪಂಚಾಯಿತಿ ವತಿಯಿಂದ ತಾಲ್ಲೂಕಿನ ಇಲವಾಲ ಗ್ರಾಮದ ಸಮುದಾಯ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ‘ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ’ ಹಾಗೂ ‘ಪಂಚ ಗ್ಯಾರಂಟಿ ಯೋಜನೆಗಳ ಅರಿವು’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ನುಡಿದಂತೆ ನಡೆದಿದೆ. ಬಡವರು ಹಾಗೂ ಮಹಿಳೆಯರ ಏಳಿಗೆಗೆ ಇವು ಸಹಕಾರಿಯಾಗಿವೆ. ಕುಟುಂಬದ ನಿರ್ವಹಣೆಯ ಜೊತೆಗೆ ಅನೇಕ ಮಹಿಳೆಯರು ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡಿದ್ದಾರೆ’ ಎಂದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಂ.ಬಿ.ಸವಿತಾ ಮಾತನಾಡಿ, ‘ಮಹಿಳೆಯರು ತಮ್ಮ ಸಾಮರ್ಥ್ಯದಿಂದ ಹಕ್ಕುಗಳನ್ನು ಪಡೆದುಕೊಳ್ಳಬೇಕು. ಯಾವುದೇ ಹಿಂಜರಿಕೆಗೆ ಒಳಗಾಗಬಾರದು’ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಗ್ಯಾರಂಟಿ ಯೋಜನೆಯ ತಾಲ್ಲೂಕು ಸಮಿತಿಯ ಅಧ್ಯಕ್ಷ ಗುರುಸ್ವಾಮಿ, ‘ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಅನೇಕರು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಮಹಿಳೆಯರ ಜೀವನ ಸುಧಾರಣೆ ಕಂಡಿದೆ. ಪ್ರತಿ ಕುಟುಂಬವೂ ನೆಮ್ಮದಿಯಿಂದ ಬದುಕುವಂತಾಗಿದೆ’ ಎಂದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಿ.ಕೃಷ್ಣ, ‘ಪ್ರಕೃತಿ ಸ್ವರೂಪಿಯಾದ ಮಹಿಳೆಯರು ಉತ್ತಮ ಸಮಾಜ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಗ್ರಾಮೀಣ ಮಹಿಳೆಯರು ಕೀಳರಿಮೆ ಬೆಳೆಸಿಕೊಳ್ಳದೆ ಆತ್ಮವಿಶ್ವಾಸದಿಂದ ಜೀವನ ನಡೆಸಬೇಕು’ ಎಂದು ಸಲಹೆ ನೀಡಿದರು.

‘ಗೃಹಲಕ್ಷ್ಮೀ ಯೋಜನೆಯಡಿ ದೊರೆತ ಹಣದಲ್ಲಿ ಹಸು ಖರೀದಿಸಿದ್ದೇನೆ. ಇದರಿಂದ ನಮ್ಮ ಕುಟುಂಬ ನಿರ್ವಹಣೆ ಸುಧಾರಿಸಿದೆ. ಭೂರಹಿತರಾದ ನಮಗೆ ಅನ್ನಭಾಗ್ಯ ಯೋಜನೆಯಿಂದ ಹೊಟ್ಟೆತುಂಬಾ ಊಟ ಮಾಡುವಂತಾಗಿದೆ. ಶಕ್ತಿ ಯೋಜನೆಯಿಂದ ಪ್ರಯಾಣದ ಹಣ ಉಳಿತಾಯವಾಗುತ್ತಿದೆ. ಗ್ಯಾರಂಟಿ ಯೋಜನೆಯಿಂದ ನಮಗೆ ಸಾಕಷ್ಟು ಅನುಕೂಲ ಆಗಿದೆ’ ಎಂದು ಆನಂದೂರು ಗ್ರಾಮದ ಫಲಾನುಭವಿ ರತ್ಮಮ್ಮ ತಿಳಿಸಿದರು.

ಜಿಲ್ಲಾ ಗ್ಯಾರಂಟಿ ಯೋಜನಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಬಿ.ಕರೀಗೌಡ, ಬಸವಣ್ಣ, ತಾಲ್ಲೂಕು ಸಮಿತಿಯ ಸದಸ್ಯರಾದ ಚನ್ನಪ್ಪ, ಕರೀಗೌಡ, ರಾಣಿ, ನವೀನ್, ಗ್ರಾಮಾಂತರ ಸಿಡಿಪಿಒ ತಿಮ್ಮಯ್ಯ, ಆಹಾರ ಶಿರಸ್ತೇದಾರ್ ಮಹೇಶ್ ಕುಮಾರ್, ಜಿಲ್ಲಾ ಕೌಶಲ ಅಭಿವೃದ್ಧಿ ಅಧಿಕಾರಿ ರಾಣಿ, ಆಹಾರ ಇನ್ಸ್ಪೆಕ್ಟರ್ ನಂದಿನಿ, ಇಲವಾಲ ಪಿಡಿಒ ಹೇಮಂತ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.