ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪಂಚಮಿತ್ರ’ ಪೋರ್ಟಲ್ ಅನಾವರಣ: ಹಲವು ಸೇವೆ ಒಂದೇ ಕಡೆ

Published 3 ಮಾರ್ಚ್ 2024, 13:48 IST
Last Updated 3 ಮಾರ್ಚ್ 2024, 13:48 IST
ಅಕ್ಷರ ಗಾತ್ರ

ಮೈಸೂರು: ಗ್ರಾಮ ಪಂಚಾಯಿತಿಗಳಲ್ಲಿ ಹಲವು ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯು ಅಭಿವೃದ್ಧಿಪಡಿಸಿರುವ ‘ಪಂಚಮಿತ್ರ’ ಪೋರ್ಟಲ್‌ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಇಲ್ಲಿ ಭಾನುವಾರ ಅನಾವರಣಗೊಳಿಸಿದರು.

ನಂತರ ಮಾತನಾಡಿದ ಸಚಿವರು, ‘ಸಾರ್ವಜನಿಕರು ಅವಶ್ಯವಿರುವ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಲು ಈ ಪೋರ್ಟಲ್‌ ಸಹಕಾರಿಯಾಗಿದೆ. ಗ್ರಾಮ ಪಂಚಾಯಿತಿಗಳಿಗೆ ಸಂಬಂಧಿಸಿದ ಸೇವೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು, ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿಯನ್ನು ಪರಿಶೀಲಿಸಲು ಹಾಗೂ ಕುಂದುಕೊರತೆಗಳನ್ನು ದಾಖಲಿಸಲು ‘ಪಂಚಮಿತ್ರ’ ವೇದಿಕೆಯು ಅನುಕೂಲವಾಗಲಿದೆ. ಈ ಸೌಲಭ್ಯವನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯಿತ್ರಿ, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು, ಸಹಾಯಕ ಕಾರ್ಯದರ್ಶಿ ಕುಲದೀಪ್, ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಂ.ಎಸ್.ಗಿರಿಧರ್, ಬಿ.ಕೆ.ಮನು, ಸಿ.ಕೃಷ್ಣ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಕೆ.ರುಕ್ಮಾಂಗದ, ಪ್ರಕಾಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT