ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪಾರ್ವತಮ್ಮ- ಶಾಮನೂರು ಶಿವಶಂಕರಪ್ಪ ಅತಿಥಿ ಗೃಹ ಉದ್ಘಾಟಿಸಿದ ಅಮಿತ್ ಶಾ

Published 11 ಫೆಬ್ರುವರಿ 2024, 7:39 IST
Last Updated 11 ಫೆಬ್ರುವರಿ 2024, 7:39 IST
ಅಕ್ಷರ ಗಾತ್ರ

ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಸುತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಕುಟುಂಬದವರು ₹12 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಪಾರ್ವತಮ್ಮ- ಶಾಮನೂರು ಶಿವಶಂಕರಪ್ಪ ಅತಿಥಿ ಗೃಹವನ್ನು ಕೇಂದ್ರ ಸಚಿವ ಅಮಿತ್ ಶಾ ಭಾನುವಾರ (ಫೆ.11) ಉದ್ಘಾಟಿಸಿದರು.

ಸುತ್ತೂರು ಮಠಾಧೀಶ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದ ಪ್ರತಾಪ ಸಿಂಹ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಸಿ.ಜಿ. ಬೆಟಸೂರಮಠ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT