ಮೈಸೂರು: ‘ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದೇ ಅಸಂವಿಧಾನಿಕ. ಹೀಗಾಗಿ ಮುಖ್ಯಮಂತ್ರಿ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ’ ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿ ಸೋಮವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ‘ ಕಾನೂನು ಬದ್ಧವಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದರೆ ರಾಜೀನಾಮೆ ಕೊಡಬಹುದಿತ್ತು. ಆದರೆ ಇದು ಪ್ರಜಾಪ್ರಭುತ್ವ ವಿರೋಧಿ ನಡೆ. ಈ ಮುಖ್ಯಮಂತ್ರಿ ಮೇಲೆ ಮಾಡಿದಂತೆಯೇ ಮುಂದಿನ ಮುಖ್ಯಮಂತ್ರಿಗೂ ಮಾಡುವುದಿಲ್ಲ ಎಂದು ಏನು ಗ್ಯಾರಂಟಿ? ಬಿಜೆಪಿ ಅಧಿಕಾರ ದುರುಪಯೋಗಪಡಿಸಿಕೊಂಡು ಏಕಚಕ್ರಾಧಿಪತ್ಯ ಸ್ಥಾಪಿಸಲು ಹೊರಟಿದೆ’ ಎಂದು ಆರೋಪಿಸಿದರು.

‘ ಸಿದ್ದರಾಮಯ್ಯ ಕರ್ನಾಟಕದಲ್ಲಿ ಕಾಂಗ್ರೆಸ್‌ನ ದೊಡ್ಡ ನಾಯಕರು. ಅವರನ್ನು ಕುರ್ಚಿಯಿಂದ ಇಳಿಸಿದರೆ ಕಾಂಗ್ರೆಸ್ ಅನ್ನು ದುರ್ಬಲಗೊಳಿಸಬಹುದು. ಮುಂದೆ ಬರುವ ಮುಖ್ಯಮಂತ್ರಿಗಳನ್ನೂ ಬೀಳಿಸಬಹುದು ಎಂಬುದು ಬಿಜೆಪಿಯ ಲೆಕ್ಕಾಚಾರ. ಇವರ ಗುರಿ ಇರುವುದೇ ಬಿಜೆಪಿಯೇತರ ಸರ್ಕಾರಗಳ ಮೇಲೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ ಸಿದ್ದರಾಮಯ್ಯ ತಪ್ಪು ಮಾಡಿಲ್ಲ. ಹೀಗಾಗಿ ಧೈರ್ಯದಿಂದ ಇದ್ದಾರೆ. ಇಡೀ ಕಾಂಗ್ರೆಸ್ ಪಕ್ಷ ಅವರ ಜೊತೆಗಿದೆ. ನನ್ನ ತಾಯಿ ಎಂದೂ ಸಾರ್ವಜನಿಕವಾಗಿ ಕಾಣಿಸಿಕೊಂಡವರಲ್ಲ. ಈ ಪ್ರಕರಣದಲ್ಲಿ ಅವರ ಹೆಸರನ್ನು ಅನಗತ್ಯವಾಗಿ ತಂದಿರುವುದು ಅವರಿಗೂ ಬೇಸರವಾಗಿದೆ. ಅವರೂ ಇದರ ವಿರುದ್ಧ ಹೋರಾಡಲಿದ್ದಾರೆ’ ಎಂದರು.

‘ ದೆಹಲಿಯಿಂದಲೂ ಎಐಸಿಸಿ ಪ್ರತಿನಿಧಿಗಳು ಕರ್ನಾಟಕಕ್ಕೆ ಬಂದಿದ್ದು, ಕಾನೂನು ಸಲಹೆ ನೀಡಲಿದ್ದಾರೆ. ನ್ಯಾಯಾಂಗ ವ್ಯವಸ್ಥೆಯಲ್ಲಿ ಖಂಡಿತ ನಮಗೆ ನ್ಯಾಯ ಸಿಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.