ಪಿರಿಯಾಪಟ್ಟಣ: ‘ಸ್ವಯಂ ಗಣತಿಯೊಂದಿಗೆ ಜನಗಣತಿ ಪ್ರಕ್ರಿಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳಿ’ ಎಂದು ತಹಶೀಲ್ದಾರ್ ನಿಸರ್ಗ ಪ್ರಿಯ ಕೋರಿದ್ದಾರೆ.

ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಜನಗಣತಿ ಮೊದಲ ಹಂತವಾಗಿ ಮನೆಗಳ ಪಟ್ಟಿ ತಯಾರಿಕೆ ಮತ್ತು ವಸತಿ ಗಣತಿ ಮೈಸೂರು ಜಿಲ್ಲೆಯಲ್ಲಿ ಏ.16 ರಿಂದ ರಿಂದ ಮೇ.30 ರವರೆಗೆ ಒಟ್ಟು 30 ದಿನಗಳ ಕಾಲ ನಡೆಸಲಾಗುತ್ತದೆ’ ಎಂದು ತಿಳಿಸಿದರು.

‘ಮನೆಗಳ ಪಟ್ಟಿ ಮತ್ತು ವಸತಿ ಗಣತಿ ಪ್ರಕ್ರಿಯಯನ್ನು ಸುಲಭಗೊಳಿಸಲು ಗಣತಿದಾರರು ಮನೆ-ಮನೆಗೆ ಭೇಟಿ ನೀಡುವ ಪ್ರಕ್ರಿಯೆ ಪ್ರಾರಂಭವಾಗುವ ಮುಂಚಿತವಾಗಿ 15 ದಿನಗಳ ಕಾಲ ಅಂದರೆ ಏ.1 ರಿಂದ ಮೇ.15 ರವರೆಗೆ ಸ್ವಯಂ ಗಣತಿ ಕೈಗೊಳ್ಳಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ’ ಎಂದರು.

ಸಾರ್ವಜನಿಕರು ಸ್ವಯಂ-ಗಣತಿಯಲ್ಲಿ ಪಾಲ್ಗೊಳ್ಳಲು ಅಧಿಕೃತ ವೆಬ್ಸೈಟ್: www.se.census.gov.in ಭೇಟಿ ನೀಡಿ ಲಾಗಿನ್ ಆಗಿ ಮನೆಗಳ ಪಟ್ಟಿ ಮತ್ತು ಗಣತಿ ಸಂಬಂಧ ಕೇಳಲಾಗುವ 33 ಪ್ರಶ್ನೆಗಳಿಗೆ ಉತ್ತರಿಸಬೇಕು. ಸಾರ್ವಜನಿಕರು ಮಾಹಿತಿಯನ್ನು ಯಶಸ್ವಿಯಾಗಿ ಸಲ್ಲಿಸಿದ ನಂತರ ಎಸ್ಎಂಸ್ ಮತ್ತು ಇಮೇಲ್ ಮೂಲಕ ರೆಫರೆನ್ಸ್ ಐಡಿ ಸ್ವೀಕೃತವಾಗುತ್ತದೆ. ಏ.16 ರಿಂದ ಗಣತಿದಾರರು ಮನೆಮನೆಗೆ ಭೇಟಿ ನೀಡಿದಾಗ ಅವರಿಗೆ ರೆಫರೆನ್ಸ್ ಐಡಿ ನೀಡುವ ಮೂಲಕ ಗಣತಿ ಪ್ರಕ್ರಿಯನ್ನು ಪೂರ್ಣಗೊಳಿಸಬೇಕು. ಒಂದು ವೇಳೆ ರೆಫರೆನ್ಸ್ ಐಡಿ ನೀಡದಿದ್ದರೆ ಗಣತಿದಾರರು ಮೊದಲಿನಿಂದ ಎಲ್ಲಾ ಪ್ರಶ್ನೆಗಳನ್ನು ಕೇಳಿ ಹೊಸದಾಗಿ ಗಣತಿ ಮಾಡಬೇಕಾಗುತ್ತದೆ’ ಎಂದು ತಿಳಿಸಿದರು.

‘ಸ್ವಯಂ ಗಣತಿಯಲ್ಲಿ ಪಾಲ್ಗೊಳ್ಳುವುದರಿಂದ ಗಣತಿದಾರರು ಬಂದಾಗ ಆಗುವ ಸಮಯ ವ್ಯಯವನ್ನು ತಪ್ಪಿಸಬಹುದಾಗಿದೆ. ಆದ ಕಾರಣ ತಾಲ್ಲೂಕಿನ ಎಲ್ಲಾ ಸಾರ್ವಜನಿಕರು ಮೇಲ್ಕಂಡ ಲಿಂಕ್ ಅನ್ನು ಬಳಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಗಣತಿಯಲ್ಲಿ ಪಾಲ್ಗೊಳ್ಳಿ’ ಎಂದು ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-38-1907283330

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.