ಪಿರಿಯಾಪಟ್ಟಣ: 21 ರಂದು ತಾಲ್ಲೂಕಿ ನಲ್ಲಿ ಅಂದಾಜು ₹ 419.78 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನೇತೃತ್ವದ ಕಾರ್ಯಕ್ರಮಕ್ಕೆ 12 ಸಾವಿರ ಜನ ಸೇರುವ ನಿರೀಕ್ಷೆ ಇದೆ ಎಂದು ಸಚಿವ ಕೆ ವೆಂಕಟೇಶ್ ತಿಳಿಸಿದರು.

ಪಟ್ಟಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘₹9.19 ಕೋಟಿ ವೆಚ್ಚದಲ್ಲಿ ಪಟ್ಟಣದ ಶಕ್ತಿದೇವತೆ ಮಸಣಿಕಮ್ಮ ದೇಗುಲದ ಜೀರ್ಣೋದ್ಧಾರ, ₹ 50 ಕೋಟಿ ಬೆಟ್ಟದಪುರ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದ ದೇವಾಲಯಕ್ಕೆ ರಸ್ತೆ ನಿರ್ಮಾಣನು, ₹ 5 ಕೋಟಿ ವೆಚ್ಚದಲ್ಲಿ ತಾಲ್ಲೂಕು ಒಕ್ಕಲಿಗರ ಸಂಘದ ಸಹಕಾರದೊಂದಿಗೆ ನಿರ್ಮಿಸುತ್ತಿರುವ ಕುವೆಂಪು ಭವನ ನಿರ್ಮಾಣ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಲಿದೆ’ ಎಂದರು.

‘ಕುವೆಂಪು ಭವನ ನಿರ್ಮಾಣದ ಜಮೀನು ಇನ್ನೂ ನಿಮ್ಮ ಹೆಸರಿನಲ್ಲಿಯೇ ಇದ್ದು , ಜನಿಕ ಆಕ್ಷೇಪ ವ್ಯಕ್ತ ಪಡಿಸುತ್ತಿದ್ದಾರೆ’ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ಆರ್ಟಿಸಿಯಲ್ಲಿ ತಾಂತ್ರಿಕ ತೊಂದರೆಯಿಂದ ದಾನ ಪತ್ರ ಆಗಿರಲಿಲ್ಲ ಎಂದು ಸ್ಪಷ್ಟಪಡಿಸಿ, 3 ಗಂಟೆಗೆ ದಾನ ಪತ್ರ ಬರೆದು ಕೊಡುವೆ’ ಎಂದರು.

ದೇವಾಲಯದ ಅಭಿವೃದ್ಧಿಗೆ ಸಾರ್ವಜನಿಕರ ದೇಣಿಗೆ ಸ್ವೀಕರಿಸಲಾಗುವುದು. ಅಂಬೇಡ್ಕರ್ ಭವನದ ಕಾಮಗಾರಿ ಪೂರ್ಣಗೊಳಿಸಲು ₹ 1 ಕೋಟಿ ಹಣ ಬಿಡುಗಡೆ, ವಾಲ್ಮೀಕಿ ಭವನ ಕಾಮಗಾರಿ ಪೂರ್ಣಗೊಳಿಸುವ ಹಂತಕ್ಕೆ ತಲುಪಿದೆ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೆಟ್ಟಿರುವ ಎಕ್ಸ್ ರೇ ಯಂತ್ರದ ಬದಲಿಗೆ ₹16 ಲಕ್ಷ ನೀಡಿ ಹೊಸ ಯಂತ್ರ ಖರೀದಿಸಲಾಗುತ್ತಿದೆ. ಹೆಚ್ಚುವರಿ ಪ್ರಸೂತಿ ವೈದ್ಯರನ್ನು ನೇಮಕ ಮಾಡಲಾಗುವುದು ಎಂದರು.

ಕೆ. ಹೊಲದಪ್ಪ, ರಹಮತ್ ಜಾನ್ ಬಾಬು, ಡಿ. ಟಿ. ಸ್ವಾಮಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-38-698390082

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.