ಪಿರಿಯಾಪಟ್ಟಣ: ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಮಂಡಳಿ ಸಭೆ ಪಟ್ಟಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಕೆ.ಕೃಷ್ಣೆಗೌಡ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೆಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಪಟ್ಟಣದ ತಾಲೂಕು ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ನಡೆದ ಕಾರ್ಯಕಾರಿ ಮಂಡಳಿ ಸಭೆಯು ಸಂಘದ ಅಧ್ಯಕ್ಷ ಕೆ.ಕೃಷ್ಣೇಗೌಡ ಅಧ್ಯಕ್ಷತೆಯಲ್ಲಿ ನಡೆಯಿತು.

ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಮೇ 23, 24 ಮತ್ತು 25 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಈ ಕ್ರೀಡಾಕೂಟಕ್ಕೆ ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾಗಿರುವ ಎಲ್ಲಾ ಕ್ರೀಡಾಪಟುಗಳು ಭಾಗವಹಿಸಬೇಕು ಎಂದು ವಿನಂತಿಸಿದರು.

ಸರ್ಕಾರಿ ನೌಕರರ ಸಂಘಕ್ಕೆ ಪಟ್ಟಣದಲ್ಲಿ ನೀಡಲಾಗಿದ್ದ 10 ಗುಂಟೆ ಆಸ್ತಿಯನ್ನು ಮರು ಪಡೆಯಲು ಮೇ 27 ರಂದು ಮೈಸೂರಿಗೆ ತೆರಳಿ ಜಿಲ್ಲಾಧಿಕಾರಿಗೆ ಮತ್ತೊಮ್ಮೆ ಮನವಿ ಸಲ್ಲಿಸುವ ಜೊತೆಗೆ ಸಚಿವ ಕೆ. ವೆಂಕಟೇಶ್ ಅವರಿಗೂ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು. ತಹಶೀಲ್ದಾರ್ ಅವರಿಗೂ ಕೂಡ ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದರು.

ಪ್ರತಿ ವರ್ಷದಂತೆ ಸರ್ಕಾರಿ ನೌಕರರಿಗೆ ನಮ್ಮ ಸಂಘದಿಂದ ಕ್ರೀಡಾಕೂಟವನ್ನು ಏರ್ಪಡಿಸುವುದು, ವಾರ್ಷಿಕ ಮಹಾಸಭೆ ನಡೆಸಲು ನಿರ್ಧರಿಸಲಾಯಿತು. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಶೇ 90 ಅಂಕ ಪಡೆದ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಮನವಿ ಮಾಡಿದರು.

ಸಂಘದ ಕಾರ್ಯದರ್ಶಿ ಧರ್ಮಪಾಲ್, ಖಜಾಂಚಿ ಶ್ರೀನಿವಾಸ್, ರಾಜ್ಯ ಪರಿಷತ್ ಸದಸ್ಯ ದೇವರಾಜು, ಹಿರಿಯ ಉಪಾಧ್ಯಕ್ಷ ಪ್ರಕಾಶ್, ಉಪಾಧ್ಯಕ್ಷ ರಮೇಶ್, ಕ್ರೀಡಾ ಕಾರ್ಯದರ್ಶಿ ರವಿ, ಸಾಂಸ್ಕೃತಿಕ ಕಾರ್ಯದರ್ಶಿ ರವಿಚಂದ್ರ, ನಿರ್ದೇಶಕರಾದ ಕುಮಾರ್, ನಿರಂಜನ್, ನವೀನ್, ರವೀಂದ್ರ, ಸುರೇಶ್, ಪದಾಧಿಕಾರಿಗಳು ಹಾಗೂ ನಿರ್ದೇಶಕರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-38-1826505764

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.