ಪಿರಿಯಾಪಟ್ಟಣ: ಭವಿಷ್ಯದ ಭಾರತವನ್ನು ಹೇಗೆ ಕಟ್ಟಬೇಕು ಎಂಬ ಚಿಂತನೆಯಲ್ಲಿ ಹೋರಾಟ ನೆಡೆಸಿ ಯಶಸ್ಸು ಕಂಡ ಧೀಮಂತ ನಾಯಕ ಬಾಬು ಜಗ ಜೀವನ್ ರಾಂ ಎಂದು ಮದ್ದೂರು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಉಪನ್ಯಾಸಕ ಡಿ.ಇ. ರಮೇಶ್ ತಿಳಿಸಿದರು.

ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಭಾನುವಾರ ಏರ್ಪಡಿಸಿದ್ದ ಡಾ.ಬಾಬು ಜಗ ಜೀವನ್ ರಾಂ ಅವರ 119ನೇ ಜನ್ಮ ದಿನಾಚರಣೆಯಲ್ಲಿ ಮಾತನಾಡಿದರು.

ತಹಶೀಲ್ದಾರ್ ನಿಸರ್ಗ ಪ್ರಿಯ ಮಾತನಾಡಿ, ಬಾಬು ಜಗ ಜೀವನ್ ರಾಂ ಅವರು ಆದರ್ಶಪ್ರಿಯವಾದ ವ್ಯಕ್ತಿ. ಸಿಕ್ಕ ಅಧಿಕಾರದಲ್ಲಿ ದೇಶದ ಅಭಿವೃದ್ಧಿಯನ್ನು ಹೇಗೆ ಮಾಡುವುದು ಎಂದು ತೋರಿಸಿಕೊಟ್ಟ ಮಹಾನ್ ಚೇತನ. ಅವರ ಸಿದ್ಧಾಂತಗಳನ್ನು ನಾವೆಲ್ಲರೂ ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳೋಣ ಎಂದರು.

ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೃಷ್ಣೇಗೌಡ, ಆದಿ ಜಾಂಭವ ಜಿಲ್ಲಾ ಉಪಾಧ್ಯಕ್ಷ ಸೀಗೂರು ವಿಜಯ್ ಕುಮಾರ್, ತಾಲ್ಲೂಕು ಆದಿ ಜಾಂಬವ ಅಧ್ಯಕ್ಷ ರವಿ, ಟಿಎಪಿಸಿಎಂಎಸ್ ಅಧ್ಯಕ್ಷ ಎಸ್.ರಾಮು, ಪಿ.ಮಹದೇವ್, ಆರ್.ಸಿ.ಚಂದ್ರು, ಡಾ.ಸೋಮಯ್ಯ, ತೋಟಗಾರಿಕೆ ಇಲಾಖೆ ಪ್ರಸಾದ್, ರೇಷ್ಮೆ ಇಲಾಖೆ ಅಧಿಕಾರಿ ಚಂದ್ರೇಗೌಡ, ತಾ.ಪಂ. ಲೆಕ್ಕಾಧೀಕ್ಷಕ ರಂಗನಾಥ್, ಭೂತನಹಳ್ಳಿ ಶಿವಣ್ಣ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-38-1770797930

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.