ಪಿರಿಯಾಪಟ್ಟಣ: ‘ತೋಟಗಾರಿಕಾ ಇಲಾಖೆಯ ಫಲಾನುಭವಿಗಳ ಬಗ್ಗೆ ಸಮರ್ಪಕವಾದ ಮಾಹಿತಿ ನೀಡುವಲ್ಲಿ ವಿಫಲರಾದ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಗುರುಸ್ವಾಮಿ ಮತ್ತು ತೋಟಗಾರಿಕೆ ಅಧಿಕಾರಿ ಪ್ರಸಾದ್ ಅವರ ವಿರುದ್ಧ ಗರಂ ಆದ ಸಚಿವ ಕೆ. ವೆಂಕಟೇಶ್ ಕೂಡಲೇ ಕಚೇರಿಗೆ ಹೋಗಿ ಮಾಹಿತಿ ತೆಗೆದುಕೊಂಡು ಬನ್ನಿ’ ಎಂದು ಅಧಿಕಾರಿಗಳನ್ನು ಸಭೆಯಿಂದ ಹೊರಕ್ಕೆ ಕಳಿಸಿದ ಘಟನೆ ಶನಿವಾರ ನಡೆಯಿತು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳ ಕಾರ್ಯವೈಖರಿಗೆ ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

‘ಕೆಡಿಪಿ ಸಭೆಗೆ ಬರುವಾಗ ಸೂಕ್ತ ಮಾಹಿತಿಗಳನ್ನು ತರಬೇಕು ಎನ್ನುವ ಪರಿಜ್ಞಾನ ನಿಮಗಿಲ್ಲವೇ’ ಎಂದು ತರಾಟೆಗೆ ತೆಗೆದುಕೊಂಡ ಸಚಿವರು, ಕೃಷಿ ಮತ್ತು ತೋಟಗಾರಿಕಾ ಇಲಾಖೆಯು ರೈತ ಸಂಪರ್ಕ ಕೇಂದ್ರಗಳ ಮೂಲಕ ಸಬ್ಸಿಡಿ ದರದಲ್ಲಿ ರೈತರಿಗೆ ಸವಲತ್ತುಗಳನ್ನುವಿತರಿಸುವಾಗ ಜನಪ್ರತಿನಿಧಿಗಳ ಸಮ್ಮುಖದಲ್ಲಿಯೇ ವಿತರಿಸಬೇಕು’ ಎಂದು ಸೂಚಿಸಿದರು.

ತಾಲ್ಲೂಕಿನ ಪ್ರತಿಯೊಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ರಸಗೊಬ್ಬರಗಳ ದಾಸ್ತಾನು ಇರುವಂತೆ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.

ಖಾಸಗಿ ಅಂಗಡಿಗಳಲ್ಲಿ ರಸಗೊಬ್ಬರಕ್ಕೆ ರೈತರು ದುಬಾರಿ ಬೆಲೆ ನೀಡಬೇಕಾಗುತ್ತದೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ರಸಗೊಬ್ಬರಗಳ ದಾಸ್ತಾನು ಇದ್ದಲ್ಲಿ ರೈತರಿಗೆ ನ್ಯಾಯಯುತವಾದ ದರದಲ್ಲಿ ರಸಗೊಬ್ಬರ ದೊರಕಲಿದೆ ಎಂದರು.

ಗ್ರಾಮ ಪಂಚಾಯಿತಿ ಮತ್ತು ಹೋಬಳಿ ಮಟ್ಟದಲ್ಲಿ ರೈತರ ಸಭೆ ನಡೆಸಿ ಸಿರಿಧಾನ್ಯಗಳ ಬಗ್ಗೆ ಮಾಹಿತಿ ನೀಡುವಂತೆ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಕುಸುಮ ಅವರಿಗೆ ಸೂಚಿಸಿದರು.

ತಂಬಾಕಿಗೆ ಸೂಕ್ತ ದರ ದೊರಕದೆ ತಂಬಾಕು ಬೆಳೆಗಾರರು ಹತಾಶರಾಗಿದ್ದು, ರೇಷ್ಮೆ ಬೆಳೆ ಮತ್ತು ಮಾರುಕಟ್ಟೆ ವ್ಯವಸ್ಥೆ ಬಗ್ಗೆ ರೈತರಿಗೆ ಸೂಕ್ತ ತಿಳುವಳಿಕೆ ನೀಡಿದಲ್ಲಿ ತಂಬಾಕು ಬೆಳೆಗಾರರು ರೇಷ್ಮೆ ಬೆಳೆಯತ್ತ ಮುಖ ಮಾಡಲಿದ್ದಾರೆ. 2023-24ರಲ್ಲಿ ಬೈ ವೋಲ್ಟೀನ್ ಸಿಎಸ್ಆರ್ ರೇಷ್ಮೆ ಹೈಬ್ರಿಡ್ ತಳಿಗೆ ಪ್ರತಿ ಕೆಜಿಗೆ ₹330ರಿಂದ ₹350 ದೊರಕುತ್ತಿತ್ತು. ಈಗ ಪ್ರತಿ ಕೆ.ಜಿಗೆ ₹850 ರಿಂದ ₹ 900ರವರೆಗೂ ದೊರಕುತ್ತಿದ್ದು ಉತ್ತಮ ಲಾಭದಾಯಕವಾದ ಕೃಷಿಯಾಗಿದೆ ಎಂದರು.

ತಂಬಾಕಿಗೆ ಪರ್ಯಾಯ ವಾಣಿಜ್ಯ ಬೆಳೆಯಾಗಿ ರೇಷ್ಮೆ ಬೆಳೆಯುವತ್ತ ರೈತರು ಮುಂದಾಗಬೇಕಿದೆ ಎಂದು ಸಲಹೆ ನೀಡಿದರು.

ಪಟ್ಟಣ ಮತ್ತು ಗ್ರಾಮೀಣ ಪ್ರದೇಶದ ಸಾರ್ವಜನಿಕರಿಗೆ ಗ್ಯಾಸ್ ಸಿಲಿಂಡರ್ಗಳ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮವಹಿಸಬೇಕು. ಹಾಸ್ಟೆಲ್ಗಳು, ಅಂಗನವಾಡಿ ಕೇಂದ್ರಗಳು ಮತ್ತು ಆಸ್ಪತ್ರೆಗಳಲ್ಲಿ ಸಿಲಿಂಡರ್ಗಳು ಕೊರತೆಯಾಗದಂತೆ ಎಚ್ಚರಿಕೆ ವಹಿಸಿ ಎಂದು ಆಹಾರ ಇಲಾಖೆಯ ಶಿರಸ್ತೆದಾರ್ ಸಣ್ಣಸ್ವಾಮಿಗೆ ತಾಕೀತು ಮಾಡಿದರು.

ರಾಗಿ ಖರೀದಿ ಕೇಂದ್ರದ ಬಗ್ಗೆ ಮಾಹಿತಿ ಪಡೆದ ಸಚಿವರು, ‘ತಾಲೂಕಿನಲ್ಲಿ 3.18 ಲಕ್ಷ ಕ್ವಿಂಟಲ್ ರಾಗಿ ಮಾರಾಟ ಮಾಡುವುದಾಗಿ ರೈತರು ನೋಂದಣಿ ಮಾಡಿಸಿದ್ದಾರೆ. ಆದರೆ ಇದುವರೆಗೂ ಶೇ 50 ರಷ್ಟು ರಾಗಿ ಮಾರಾಟವಾಗಿಲ್ಲದಿರುವುದು ಏಕೆ’ ಎಂದು ಪ್ರಶ್ನಿಸಿದರು.

ಖಾಸಗಿ ರಾಗಿ ಖರೀದಿದಾರರು ನೋಂದಣಿ ಮಾಡಿಕೊಂಡಿರುವ ರೈತರ ಹೆಸರಿನಲ್ಲಿ ರಾಗಿ ಮಾರಾಟ ಮಾಡುತ್ತಿರುವುದಾಗಿ ದೂರುಗಳು ಕೇಳಿ ಬರುತ್ತಿದ್ದು, ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ತಾಲ್ಲೂಕಿನ ರಾವಂದೂರು ಮತ್ತು ಹಾರನಹಳ್ಳಿ ಕೇಂದ್ರಗಳಲ್ಲಿ ಸರ್ಕಾರಿ ಜಾಗಗಳನ್ನು ಗುರುತಿಸಿ ಅಲ್ಲಿ ಮಾರುಕಟ್ಟೆ ಯಾರ್ಡ್ ಮತ್ತು ಗೋದಾಮುಗಳನ್ನು ನಿರ್ಮಿಸಿ ಎಂದು ತಹಶೀಲ್ದಾರ್ ನಿಸರ್ಗಪ್ರಿಯರಿಗೆ ಹೇಳಿದರು.

ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಅರಣ್ಯ ಇಲಾಖೆಯ ಡಿಸಿಎಫ್ ಕಿರುತಂಬನ್, ತಾಲ್ಲೂಕು ಪಂಚಾಯಿತಿ ಇಒ ಡಿ.ಬಿ. ಸುನೀಲ್ ಕುಮಾರ್, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಕೆಡಿಪಿ ಸದಸ್ಯರಾದ ಕೆ.ಆರ್.ನಿರೂಪ, ಲಕ್ಷ್ಮೀನಾರಾಯಣ, ಮಹಮ್ಮದ್ ಶಫಿ, ಶೇಖರ್, ಮಹದೇವ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-38-232201939

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.