ಪಿರಿಯಾಪಟ್ಟಣ: ‘ತಾಲ್ಲೂಕು ಆಡಳಿತದಿಂದ ಜನರಿಗೆ ಸಾಕಷ್ಟು ಅನ್ಯಾಯ ಆಗುತ್ತಿದೆ, ಇದಕ್ಕೆ ಸ್ಥಳೀಯ ಸಚಿವರ ಭ್ರಷ್ಟಾಚಾರ ಕೂಡ ಕಾರಣ’ ಎಂದು ಮಾಜಿ ಶಾಸಕ ಕೆ. ಮಹದೇವ್ ಆರೋಪಿಸಿದರು.

ಪಟ್ಟಣದಲ್ಲಿ ಜೆಡಿಎಸ್ ಪಕ್ಷದಿಂದ ಭಾನುವಾರ ಆಯೋಜಿಸಿದ್ದ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ, ಬಿಎಲ್ಎ-2 ಪದಾಧಿಕಾರಿಗಳ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.

‘ಕಾರ್ಯಕರ್ತರು ತಳಮಟ್ಟದಿಂದ ಪಕ್ಷ ಸಂಘಟನೆಗೆ ಸಿದ್ಧರಾಗಬೇಕು. ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ಲೋಪದೋಷವನ್ನು ಜನಸಾಮಾನ್ಯರಿಗೆ ತಿಳಿಸುವ ಮೂಲಕ ಕ್ಷೇತ್ರದಲ್ಲಿ ಜೆಡಿಎಸ್ ಮತ್ತೆ ಅಧಿಕಾರಕ್ಕೆ ತರುವಲ್ಲಿ ಕಾರ್ಯಕರ್ತರು ಶ್ರಮಿಸಬೇಕು’ ಎಂದು ತಿಳಿಸಿದರು.

‘ತಾಲ್ಲೂಕಿನಲ್ಲಿ ಪಕ್ಷ ಸಂಘಟನೆಗಾಗಿ 34 ಗ್ರಾಮ ಪಂಚಾಯಿತಿಗಳ ಕಾರ್ಯಕರ್ತರ ಸಭೆ ನಡೆಸಿ ಕೋರ್ ಕಮಿಟಿ ಮತ್ತು ಬೂತ್ ಮಟ್ಟದ ಕಮಿಟಿಗಳನ್ನು ನಿರ್ಮಾಣ ಮಾಡಲಾಗಿದ್ದು, ತಲಾ 15 ಸದಸ್ಯರನ್ನೊಳಗೊಂಡ ಈ ಸಮಿತಿಯಲ್ಲಿ ಪ್ರತಿ ಸಮುದಾಯಕ್ಕೂ ಅವಕಾಶವನ್ನು ಕಲ್ಪಿಸಲಾಗಿದೆ’ ಎಂದರು.

ಜೆಡಿಎಸ್ ಪಕ್ಷದ ರಾಜ್ಯ ವಕ್ತಾರ ಜಿ.ಪಿ. ಅಶ್ವಿನ್ ಕುಮಾರ್ ಮಾತನಾಡಿ, ‘ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಲು ರಾಜ್ಯ ಸಮಿತಿಯು ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಕೆಲವೊಂದು ನಿಯಮ ಮತ್ತು ಸಿದ್ಧಾಂತಗಳನ್ನು ಮಾಡಿ ಬಿಎಲ್ಎ ಪದಾಧಿಕಾರಿಗಳನ್ನು ನೇಮಕಗೊಳಿಸಿ ಅವರಿಗೆ ಜವಾಬ್ದಾರಿಯನ್ನು ನೀಡಲಾಗಿದೆ. ಇವರು ಈ ಜವಾಬ್ದಾರಿಗಳನ್ನು ಪ್ರಾಮಾಣಿಕತೆಯಿಂದ ನಿರ್ವಹಿಸಿ ಪಕ್ಷದ ಶ್ರೇಯಸ್ಸಿಗೆ ದುಡಿಯಬೇಕು’ ಎಂದರು.

ಜೆಡಿಎಸ್ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಅಣ್ಣಯ್ಯ ಶೆಟ್ಟಿ, ಮೈಮುಲ್ ಮಾಜಿ ನಿರ್ದೇಶಕ ರಾಜೇಂದ್ರ, ಪುರಸಭೆ ಮಾಜಿ ಸದಸ್ಯರಾದ ಮಂಜುನಾಥ್ ಸಿಂಗ್, ಸದಸ್ಯ ನಿರಂಜನ್, ಪಿ.ಸಿ.ಕೃಷ್ಣ, ಮುಖಂಡರಾದ ಕೆ.ರಮೇಶ್, ಗಗನ್, ಸುನೀಲ್, ಧನಂಜಯ, ದಿನೇಶ್, ಪಿ.ಕೆ.ಕುಮಾರ್, ಅಶೋಕ್, ಚಂದ್ರು, ಜೆ.ಎಸ್. ನಾಗರಾಜ್, ಗಣೇಶ್, ಕುಬೇರ, ರಾಜೇಗೌಡ, ರೇಣುಕಾಸ್ವಾಮಿ, ರಂಗನಾಥ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-38-400914794

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.