ಪಿರಿಯಾಪಟ್ಟಣ: ‘ಜನಸಾಮಾನ್ಯರ ನೋವು ನಲಿವುಗಳಿಗೆ ಸ್ಪಂದಿಸುವ ಗುಣವನ್ನು ಸಂಸದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಹೊಂದಿದ್ದು, ಅವರಿಗೆ ಕೇಂದ್ರ ಸಚಿವ ಸ್ಥಾನ ದೊರಕಬೇಕು’ ಎಂದು ಮಾಜಿ ಶಾಸಕ ಎಚ್.ಸಿ.ಬಸವರಾಜ್ ಹೇಳಿದರು.

ಸಂಸದರ ಜನ್ಮದಿನ ಪ್ರಯುಕ್ತ ಮಂಗಳವಾರ ತಾಲ್ಲೂಕು ಬಿಜೆಪಿ ಘಟಕದಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿರುವ ಒಳರೋಗಿಗಳಿಗೆ ಮಂಗಳವಾರ ಹಣ್ಣು ಮತ್ತು ಬ್ರೆಡ್ ವಿತರಿಸಿ ಮಾತನಾಡಿದರು.

‘ಸರಳ ವ್ಯಕ್ತಿತ್ವವನ್ನು ಹೊಂದಿರುವ ಯದುವೀರ್ ಅವರು ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ’ ಎಂದರು.

ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ವಿ.ರಾಜೇಂದ್ರ ಮಾತನಾಡಿ, ‘ಸಂಸದರ ಸಾಮಾಜಿಕ ಕಳಕಳಿಯಿಂದ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ’ ಎಂದರು.

ಬಿಜೆಪಿ ಮುಖಂಡರಾದ ಆರ್.ಟಿ.ಸತೀಶ್, ಟಿ.ರಮೇಶ್, ಲೋಕಪಾಲಯ್ಯ, ರವಿ, ಮೋಹನ್ ಲಾಲ್, ಪ್ರಹ್ಲಾದ್, ನಿತ್ಯಾನಂದ, ಪ್ರಸಾದ್ ಕುಟ್ಟಿ, ರಾಜೇ ಅರಸ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-38-815817994

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.