ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು | ಸಾವಿರ ಸಸಿಗಳ ನೆಡುವ ಕಾರ್ಯಕ್ಕೆ ಚಾಲನೆ

Published 11 ಜೂನ್ 2024, 14:06 IST
Last Updated 11 ಜೂನ್ 2024, 14:06 IST
ಅಕ್ಷರ ಗಾತ್ರ

ಮೈಸೂರು: ಪರಿಸರ ದಿನಾಚರಣೆ ಅಂಗವಾಗಿ ಮೈಸೂರಿನ ರೋಟರಿ ಕ್ಲಬ್ ಸಂಸ್ಥೆಗಳ ವಲಯ– 8 ಮತ್ತು ಸಿಲಿಕಾನ್ ಸಿಟಿ ಇಂಟರ್ ನ್ಯಾಷನಲ್ ಸ್ಕೂಲ್ ವತಿಯಿಂದ ಸಾವಿರ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಮುಂಡಿಬೆಟ್ಟದ ತಪ್ಪಲಿನ ಲಲಿತಾದ್ರಿಪುರದಲ್ಲಿರುವ ಸಿಲಿಕಾನ್ ಸಿಟಿ ಇಂಟರ್ ನ್ಯಾಷನಲ್ ಸ್ಕೂಲ್ ಆವರಣದಲ್ಲಿ ಚಾಲನೆ ನೀಡಲಾಯಿತು.

ರೋಟರಿ ಇಂಟರ್ ನ್ಯಾಷನಲ್ 3181ರ ಜಿಲ್ಲಾ ಗವರ್ನರ್ ವಿಕ್ರಮದತ್ತಾ ಮಾತನಾಡಿ, ‘ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಸಾವಿರ ಸಸಿಗಳನ್ನು ನೆಡುವ ಮೂಲಕ ಶಾಲೆಯು ಶಿಕ್ಷಣದ ಜೊತೆಗೆ, ಪರಿಸರ ಸಂರಕ್ಷಣೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುತ್ತಿರುವುದು ಉತ್ತಮ ಕೆಲಸ. ರೋಟರಿಯ ಪ್ರಮುಖ ಗುರಿಗಳಲ್ಲಿ ಪರಿಸರ ಮತ್ತು ವಿದ್ಯೆಗೆ ಮಹತ್ವ ನೀಡಲಾಗಿದೆ. ಸಂಘ ಸಂಸ್ಥೆಗಳ ಜೊತೆ ಎಲ್ಲರನ್ನೂ ಒಗ್ಗೂಡಿಸಿಕೊಂಡು ಈ ಸೇವೆಯನ್ನು ಮುಂದುವರಿಸಿಕೊಂಡು ಹೋಗುತ್ತೇವೆ’ ಎಂದರು.

ಮೈಸೂರು ವಿಭಾಗದ ಡಿಸಿಎಫ್ ಕೆ.ಎನ್. ಬಸವರಾಜ ಮಾತನಾಡಿ, ‘ಅರಣ್ಯ ಇಲಾಖೆಯಿಂದ ರೈತರು ಹಾಗೂ ಸಾರ್ವಜನಿಕರಿಗೆ ಈ ವರ್ಷ 3.30 ಲಕ್ಷ ಸಸಿಗಳನ್ನು ರಿಯಾಯತಿ ದರದಲ್ಲಿ ನೀಡುತ್ತಿದ್ದು, ಈ ವರ್ಷ ಅರಣ್ಯ ಇಲಾಖೆಯಿಂದಲೂ ಒಂದು ಲಕ್ಷ ಸಸಿಗಳನ್ನೂ ನೆಡಲಾಗುತ್ತಿದೆ. ಅರಣ್ಯ ಇಲಾಖೆಯಿಂದಷ್ಟೇ ಸಸಿಗಳನ್ನು ನೆಟ್ಟರೆ ಪರಿಸರ ಸಂರಕ್ಷಣೆ ಸಾಧ್ಯವಿಲ್ಲ. ರೋಟರಿಯಂತಹ ಸಂಘ ಸಂಸ್ಥೆಗಳು, ಸಾರ್ವಜನಿಕರು ಕೈಜೋಡಿಸಬೇಕು’ ಎಂದು ಕೋರಿದರು.

ಸಿಲಿಕಾನ್ ಸಿಟಿ ಇಂಟರ್ ನ್ಯಾಷನಲ್ ಸ್ಕೂಲ್‌ನ ಕಾರ್ಯದರ್ಶಿ ಎಲ್.ರವಿ, ಮೈಸೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಮಾಜಿ ಸದಸ್ಯ ಈ.ಸಿ. ನಿಂಗರಾಜ್ ಗೌಡ, ಸಹಾಯಕ ಗವರ್ನರ್ ಎಂ. ರಾಜೀವ್, ಕೇಶವಪ್ರಕಾಶ್, ಎಂ.ಮೋಹನ್, ಕೆ.ಎನ್. ಸಂತೋಷ್, ಎನ್.ಕಿರಣ್, ಎಂ. ಎಸ್. ಉಮಶಂಕರ್ ಆರಾಧ್ಯ, ಮುರಳೀಧರ್, ಗೋವರ್ಧನ್ ಯಾದವ್, ಪ್ರಭಾಕರ್, ದಿನೇಶ್ ಬಸವಾಪಟ್ಟಣ, ದಿಲೀಪ್ ಆರಾಧ್ಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT