ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮೈಸೂರು: ಪಿಎಂ–ಜನ್‌ಮನ್‌ನಲ್ಲಿ 25 ಕಾರ್ಯಕ್ರಮ

Published : 24 ಸೆಪ್ಟೆಂಬರ್ 2024, 4:07 IST
Last Updated : 24 ಸೆಪ್ಟೆಂಬರ್ 2024, 4:07 IST
ಫಾಲೋ ಮಾಡಿ
Comments

ಮೈಸೂರು: ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ‘ಪ್ರಧಾನ ಮಂತ್ರಿ ಜನಜಾತಿಯ ಉನ್ನತ್ ಗ್ರಾಮ ಅಭಿಯಾನ’ದಡಿ (ಪಿಎಂ–ಜನ್‌ಮನ್‌) 17 ಇಲಾಖೆಗಳಿಂದ 25 ಕಾರ್ಯಕ್ರಮಗಳನ್ನು ಎಚ್.ಡಿ.ಕೋಟೆ, ಸರಗೂರು, ಹುಣಸೂರು, ಮೈಸೂರು, ಪಿರಿಯಾಪಟ್ಟಣ, ನಂಜನಗೂಡು ಮತ್ತು ತಿ.ನರಸೀಪುರ ತಾಲ್ಲೂಕುಗಳ 62 ಗ್ರಾಮಗಳ ಪರಿಶಿಷ್ಟ ಪಂಗಡದ ಹಾಡಿ–ಕಾಲೊನಿಗಳಲ್ಲಿ ಅನುಷ್ಠಾನಗೊಳಿಸಲಾಗುತ್ತದೆ.

ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಪಕ್ಕಾ ಮನೆಗಳು, ಸಂಪರ್ಕ ರಸ್ತೆ ಯೋಜನೆ, ಗ್ರಾಮೀಣ ನೀರು ಸರಬರಾಜು ಇಲಾಖೆಯಿಂದ ನೀರು ಸರಬರಾಜು ಮಾಡಲು ಜಲ ಜೀವನ್ ಮಿಷನ್ ಯೋಜನೆ, ವಿದ್ಯುತ್ ಇಲಾಖೆಯ ಮನೆ ವಿದ್ಯುದ್ದೀಕರಣ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆಯ ಆಫ್-ಗ್ರಿಡ್ ಸೌರ ಘಟಕ, ಹೊಸ ಸೌರ ವಿದ್ಯುತ್ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಚಾರಿ ವೈದ್ಯಕೀಯ ಘಟಕಗಳು, ರಾಷ್ಟ್ರೀಯ ಆರೊಗ್ಯ ಮಿಷನ್ ಮತ್ತು ಆಯುಷ್ಮಾನ್ ಕಾರ್ಡ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಪೂರೈಕೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಂಗನವಾಡಿ ಕೇಂದ್ರಗಳ ಅಭಿವೃದ್ಧಿ, ಪೋಷಣ್‌ ಅಭಿಯಾನ, ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿ ನಿಲಯಗಳ ನಿರ್ಮಾಣ-ಸಮಗ್ರ ಶಿಕ್ಷಾ ಅಭಿಯಾನದಲ್ಲಿ ಸೌಲಭ್ಯ ಕಲ್ಪಿಸಲಾಗುವುದು. ಆದರ್ಶ ಗ್ರಾಮ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ.

ಮಾಹಿತಿಗೆ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳನ್ನು– ಎಚ್.ಡಿ.ಕೋಟೆ ಮತ್ತು  ಸರಗೂರು- ಮೊ.ಸಂಖ್ಯೆ– 98445 67901, ಹುಣಸೂರು- 94815 32318, ನಂಜನಗೂಡು-97416 67143, ತಿ.ನರಸೀಪುರ-99006 22184, ಪಿರಿಯಾಪಟ್ಟಣ-94482 17369 ಸಂಪರ್ಕಿಸಬಹುದು ಎಂದು ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT