ಭಾನುವಾರ, ನವೆಂಬರ್ 27, 2022
21 °C
ಪೋಕ್ಸೊ ಅಡಿಯಲ್ಲಿ ದೀರ್ಘಾವಧಿ ಶಿಕ್ಷೆ ವಿಧಿಸಿದ ದೇಶದ ಮೊದಲ ಪ್ರಕರಣ

ಪೋಕ್ಸೊ | ಲೈಂಗಿಕ ಅಪರಾಧ: 43 ವರ್ಷ ಜೈಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: 9 ವರ್ಷದ ಬಾಲಕಿ ಮೇಲೆ ಲೈಂಗಿಕ ಅಪರಾಧ ಎಸಗಿದ ಕಾರ್ಮಿಕ ಎಂ.ಡಿ.ನಾಜೀಮ್‌ (33) ಎಂಬುವವನಿಗೆ ಇಲ್ಲಿನ ಪೋಕ್ಸೊ ವಿಶೇಷ ನ್ಯಾಯಾಲಯ 43 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ. ಪೋಕ್ಸೊ ಅಡಿಯಲ್ಲಿ ದೀರ್ಘಾವಧಿ ಶಿಕ್ಷೆ ವಿಧಿಸಿದ ದೇಶದ ಮೊದಲ ಪ್ರಕರಣ ಇದಾಗಿದೆ.

ಬಿಹಾರ ಮೂಲದ ನಾಜೀಮ್‌ ತಿ.ನರಸೀಪುರ ರಸ್ತೆಯಲ್ಲಿರುವ ನಟರೊಬ್ಬರ ತೋಟದ ಮನೆ ಯಲ್ಲಿ ಕುದುರೆ ಲಾಳ ಕಟ್ಟುವ ಕೆಲಸ ಮಾಡುತ್ತಿದ್ದ. 2021ರಲ್ಲಿ ಬಾಲಕಿಗೆ ಅಶ್ಲೀಲ ವಿಡಿಯೊಗಳನ್ನು ತೋರಿಸಿ ಲೈಂಗಿಕ ಅಪರಾಧ ಎಸ ಗಿದ್ದ. ಆ ಬಗ್ಗೆ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಸಂತ್ರಸ್ತ ಬಾಲಕಿಯು ಪೋಷಕರಿಗೆ 2021ರ ಸೆ.15ರಂದು ಮಾಹಿತಿ ನೀಡಿದ್ದಳು. ತೋಟದ ಮನೆ ವ್ಯವಸ್ಥಾಪಕ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದ ಮೈಸೂರಿನ ಮಹಿಳಾ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು