ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಣಸೂರು | ಪಿ.ಎಂ ಆವಾಸ್: 468 ಮಂದಿಗೆ ಸೂರು

Published 2 ಮಾರ್ಚ್ 2024, 13:41 IST
Last Updated 2 ಮಾರ್ಚ್ 2024, 13:41 IST
ಅಕ್ಷರ ಗಾತ್ರ

ಹುಣಸೂರು: ನಗರದ ಸರಸ್ವತಿಪುರಂ ಕೊಳೆಗೇರಿಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಅನುದಾನದಲ್ಲಿ ನಿರ್ಮಿಸಿದ್ದ ಮನೆಯನ್ನು ಶಾಸಕ ಹರೀಶ್ ಗೌಡ ಉದ್ಘಾಟಿಸಿ, ಮುಖ್ಯಮಂತ್ರಿಯ ವರ್ಚುಯಲ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ‘ರಾಜ್ಯದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 36 ಸಾವಿರ ಮನೆಗಳನ್ನು ಮುಖ್ಯಮಂತ್ರಿ ಲೋಕಾರ್ಪಣೆ ಮಾಡಿದ್ದಾರೆ. ಆ ಪೈಕಿ ಹುಣಸೂರು ನಗರದಲ್ಲಿ ನಿವೇಶನ ಹೊಂದಿದ್ದ 468 ಅರ್ಹ ಫಲಾನುಭವಿಗಳು ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ. ಈ ಯೋಜನೆಯಲ್ಲಿ ಫಲಾನುಭವಿಗೆ ₹ 4.78 ಲಕ್ಷ ಅನುದಾನ ಸಿಗಲಿದೆ’ ಎಂದರು.

ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯರಾದ ಸತೀಶ್ ಕುಮಾರ್, ಶರವಣ, ರಾಣಿ ಪೆರುಮಾಳ್, ಗೀತಾ ನಿಂಗರಾಜ್, ಸೌರಭ ಸಿದ್ದರಾಜು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT