ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ರಜಾವಾಣಿ’ ಅಮೃತ ಮಹೋತ್ಸವ: ರಸ್ತೆ ಓಟದ ಸ್ಪರ್ಧೆ ನಾಳೆ

Last Updated 3 ಫೆಬ್ರುವರಿ 2023, 13:01 IST
ಅಕ್ಷರ ಗಾತ್ರ

ಮೈಸೂರು: ‘ಪ್ರಜಾವಾಣಿ’ ಅಮೃತ ಮಹೋತ್ಸವ ಮತ್ತು ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ‘ಪ್ರಜಾವಾಣಿ’ ಹಾಗೂ ಮೈಸೂರಿನ ಕ್ಲಿಯರ್‌ಮೆಡಿ ರೇಡಿಯಂಟ್‌ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಸಹಯೋಗದಲ್ಲಿ ಫೆ.4ರಂದು ಬೆಳಿಗ್ಗೆ 6ಕ್ಕೆ ನಗರದ ಅರಮನೆ ಉತ್ತರ ದ್ವಾರದ ಕೋಟೆ ಆಂಜನೇಯ ದೇವಸ್ಥಾನದ ಆವರಣದಲ್ಲಿ ರಸ್ತೆ ಓಟದ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಮೇಯರ್ ಶಿವಕುಮಾರ್ ಹಾಗೂ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಉದ್ಘಾಟಿಸಲಿದ್ದಾರೆ. ನಗರಪಾಲಿಕೆ ಆರೋಗ್ಯಾಧಿಕಾರಿ ಡಾ.ಡಿ.ಜಿ.ನಾಗರಾಜ್‌ ಮತ್ತು ಚಲನಚಿತ್ರ ನಟ ಎನ್‌.ಎಸ್.ನಾಗಭೂಷಣ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಹುಮಾನ ವಿತರಣೆಯನ್ನು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ನಡೆಸಿಕೊಡಲಿದ್ದಾರೆ.

4 ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ 1 ಕಿ.ಮೀ., 6ರಿಂದ 10ನೇ ತರಗತಿಯವರಿಗೆ 3 ಕಿ.ಮೀ., ಪಿಯುಸಿ ಮತ್ತು ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ 5 ಕಿ.ಮೀ. ಸ್ಪರ್ಧೆ ಇರಲಿದೆ ಹಾಗೂ ಮುಕ್ತ ಸ್ಪರ್ಧೆ ವಿಭಾಗದಲ್ಲಿ (5.ಕಿ.ಮೀ.) ಸಾರ್ವಜನಿಕರು ಭಾಗವಹಿಸಬಹುದು. ಪ್ರತಿ ವಿಭಾಗದಲ್ಲೂ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ವಿಜೇತರಿಗೆ ನಗದು ಬಹುಮಾನ ನೀಡಲಾಗುವುದು. ಪಾಲ್ಗೊಂಡು ಗುರಿ ಮುಟ್ಟುವ ಎಲ್ಲರಿಗೂ ಪದಕ ಮತ್ತು ಪ್ರಮಾಣಪತ್ರ ವಿತರಿಸಲಾಗುವುದು. ಪ್ರತಿ ವಿಭಾಗದಲ್ಲಿ ಬಾಲಕಿಯರು, ಮಹಿಳೆಯರಿಗೆ ಪ್ರತ್ಯೇಕ ಬಹುಮಾನ ನೀಡಲಾಗುವುದು. ಪ್ರವೇಶ ಉಚಿತವಿದೆ.

ವಿದ್ಯಾರ್ಥಿ, ಯುವಜನರು ಹಾಗೂ ಸಾರ್ವಜನಿಕರಿಗೆ ಕ್ಯಾನ್ಸರ್‌ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಓಟ ಆಯೋಜಿಸಲಾಗಿದೆ. ತಜ್ಞ ವೈದ್ಯರ ಉಪ‍ನ್ಯಾಸವೂ ಇರಲಿದೆ. ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಯಶಸ್ಸು ಕಂಡವರು, ನಗರದ ಸಂಘ–ಸಂಸ್ಥೆಗಳ ಸದಸ್ಯರು ಪಾಲ್ಗೊಳ್ಳಲಿದ್ದಾರೆ.

ವೈದ್ಯರು, ‘ಪ್ರಜಾವಾಣಿ’ ಮತ್ತು ‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕಾ ಬಳಗದ ಸಿಬ್ಬಂದಿ, ಏಜೆಂಟರು, ಪತ್ರಿಕಾ ವಿತರಕರು, ವೈದ್ಯಕೀಯ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಕ್ಯಾನ್ಸರ್‌ನಿಂದ ದೂರವಿರುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ಕೋರಲಾಗಿದೆ.

ಸ್ಪರ್ಧೆಯಲ್ಲಿ ಭಾಗವಹಿಸಲು ಬಯಸುವವರು, ಸ್ಥಳದಲ್ಲೇ ನೋಂದಣಿ ಮಾಡಿಕೊಳ್ಳಬಹುದು. ಆಸಕ್ತರು ಹೆಚ್ಚಿನ ಮಾಹಿತಿಗೆ ಮೊ.ಸಂಖ್ಯೆ: 94489 14995 (ಪ್ರಸರಣ ವಿಭಾಗದ ವ್ಯವಸ್ಥಾಪಕ ಎಸ್.ಪ್ರಕಾಶ್) ಅಥವಾ 63604 13896 (ರೇಡಿಯಂಟ್ ಆಸ್ಪತ್ರೆಯ ಸಿ.ಎನ್.ನಾಗಾರ್ಜುನ) ಸಂಪರ್ಕಿಸಬಹುದು.‌

ಓಟದ ಸ್ಪರ್ಧೆಯ ಮಾರ್ಗ

ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಆರಂಭವಾಗಿ ದೊಡ್ಡ ಗಡಿಯಾರ–ಅಶೋಕ ರಸ್ತೆ– ನೆಹರೂ ವೃತ್ತ–ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ–ಬಿ.ಎನ್.ರಸ್ತೆ–ಹಾರ್ಡಿಂಜ್ ರಸ್ತೆ–ಎ.ವಿ.ರಸ್ತೆ ಮೂಲಕ ಸಾಗಿ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದವರೆಗೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT