ಮೈಸೂರು: ‘ಪ್ರಜಾವಾಣಿ’ಯು ನ.15ರಿಂದ 45 ದಿನ ಆಯೋಜಿಸಿರುವ ನ್ಯೂಸ್ ಕ್ವಿಜ್ ಸ್ಪರ್ಧೆಯ ಪೋಸ್ಟರ್‌ಗಳನ್ನು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಗುರುವಾರ ಬಿಡುಗಡೆಗೊಳಿಸಿದರು.

ಸೋಮವಾರದಿಂದ ಶನಿವಾರದವರೆಗೆ ಪ್ರತಿ ದಿನ ಎರಡು ಸರಳ ಪ್ರಶ್ನೆಗಳು ಹಾಗೂ ಭಾನುವಾರ ಐದು ವಿಶೇಷ ಪ್ರಶ್ನೆಗಳನ್ನು ಕೇಳಲಾಗುವುದು. ಪ್ರಶ್ನೆಗಳನ್ನು ‘ಪ್ರಜಾವಾಣಿ’ ಪತ್ರಿಕೆಯಲ್ಲಿ ಬಂದಿರುವ ಸುದ್ದಿಗಳಿಂದಲೇ ಕೇಳಲಾಗುತ್ತದೆ.

‘ವಿದ್ಯಾರ್ಥಿಗಳು ಸೇರಿದಂತೆ ಜನರಲ್ಲಿ ಓದುವ ಹವ್ಯಾಸ ಹೆಚ್ಚಿಸಲಿಕ್ಕಾಗಿಯೇ ‘ಪ್ರಜಾವಾಣಿ’ ವಿಭಿನ್ನ ಪ್ರಯೋಗಕ್ಕೆ ಮುಂದಾಗಿದೆ. ಈ ಸ್ಪರ್ಧೆಯಲ್ಲಿ ಹೆಚ್ಚಿನ ಜನರು ಪಾಲ್ಗೊಂಡು ಇದರ ಪ್ರಯೋಜನ ಪಡೆಯಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪೋಸ್ಟರ್ ಬಿಡುಗಡೆ ಮಾಡಿದ ಬಳಿಕ ತಿಳಿಸಿದರು.

‘ಪ್ರಜಾವಾಣಿಯ ಈ ಸ್ಪರ್ಧೆ ಜ್ಞಾನಾರ್ಜನೆಯ ಜೊತೆಗೆ ಓದುವ ಹವ್ಯಾಸ ಬೆಳೆಸಿಕೊಳ್ಳಲು ಸಹಕಾರಿಯಾಗಲಿದೆ’ ಎಂದು ಹೇಳಿದರು.

ನ್ಯೂಸ್ ಕ್ವಿಜ್ ಸ್ಪರ್ಧೆಗೆ ಶುಭವಾಗಲಿ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಶುಭ ಹಾರೈಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.