ಚಾಮುಂಡೇಶ್ವರಿ ದೇವಸ್ಥಾನದ ಬಳಿ ‘ಕಲ್ಲಿನ ಕ್ಯೂ ಮಂಟಪ’ ನಿರ್ಮಾಣಕ್ಕಾಗಿ ಕಾಮಗಾರಿ ನಡೆದಿರುವುದು
‘ಪ್ರಸಾದ್’ ಯೋಜನೆಯಡಿ ಚಾಮುಂಡಿಬೆಟ್ಟದ ಪಾರಂಪರಿಕತೆಗೆ ಪರಿಸರಕ್ಕೆ ಯಾವುದೇ ಧಕ್ಕೆ ಆಗದಂತೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು. ಭಕ್ತರಿಗೆ ಅನುಕೂಲ ಮಾಡಿಕೊಡಲಾಗುವುದು
ಡಾ.ಎಚ್.ಸಿ. ಮಹದೇವಪ್ಪ ಜಿಲ್ಲಾ ಉಸ್ತುವಾರಿ ಸಚಿವ
ಭಕ್ತರಿಗೆ ಸುಗಮ ದರ್ಶನಕ್ಕಾಗಿ ‘ಕಲ್ಲಿನ ಕ್ಯೂ ಮಂಟಪ’ ನಿರ್ಮಿಸಲಾಗುವುದು. ಮಹಾಬಲೇಶ್ವರ ದೇವಸ್ಥಾನದ ಪಕ್ಕದಲ್ಲಿ ಸಾಗುವ ಕ್ಯೂ ಚಾಮುಂಡೇಶ್ವರಿ ದೇಗುಲದ ಮುಂದೆ ಸೇರುತ್ತದೆ
ಜಿ.ಲಕ್ಷ್ಮೀಕಾಂತರೆಡ್ಡಿ ಜಿಲ್ಲಾಧಿಕಾರಿ
ನಾನು ಸಂಸದ ಆಗಿದ್ದಾಗ ಪ್ರಸಾದ್ ಯೋಜನೆಗೆ ಬಿ.ಎಸ್. ಯಡಿಯೂರಪ್ಪ ಅವರ ಸಹಕಾರದಿಂದ ಅನುಮೋದನೆ ಕೊಡಿಸಿದ್ದೆ. ಈಗಿನ ವಿವಾದದ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ
ಪ್ರತಾಪ ಸಿಂಹ ಮಾಜಿ ಸಂಸದ
ಬೆಟ್ಟ ಈಗಾಗಲೇ ಕಾಂಕ್ರೀಟ್ ಕಾಡಾಗಿದೆ. ನೈಸರ್ಗಿಕ ಸೌಂದರ್ಯ ಸವಿಯಲು ಆಗದಂತಾಗಿದೆ. ಧಾರ್ಮಿಕ ಸ್ಥಳವನ್ನು ಪಿಕ್ನಿಕ್ ಸ್ಪಾಟ್ ಮಾಡಲು ಸರ್ಕಾರ ಯತ್ನಿಸುತ್ತಿರುವುದು ಸರಿಯಲ್ಲ
ವಿಕ್ರಮ ಅಯ್ಯಂಗಾರ್ ಚಾಮುಂಡೇಶ್ವರಿ ಭಕ್ತ
‘ಧಾರಣ ಸಾಮರ್ಥ್ಯ ಮೌಲ್ಯಮಾಪನ ಮಾಡದೇ...’
‘ಚಾಮುಂಡಿಬೆಟ್ಟದಲ್ಲಿ ಪ್ರಸಾದ್ ಯೋಜನೆಯ ಕಾಮಗಾರಿಗಳನ್ನು ಕೈಗೊಳ್ಳುವ ಮುನ್ನ ಇದು ಪರಿಸರದ ಮೇಲೆ ಉಂಟು ಮಾಡುವ ಪರಿಣಾಮಗಳ ಬಗ್ಗೆ ಮತ್ತು ಬೆಟ್ಟದ ಧಾರಣ ಸಾಮರ್ಥ್ಯದ ಕುರಿತು ಮೌಲ್ಯಮಾಪನ ಮಾಡಿಲ್ಲ’ ಎಂಬ ದೂರು ‘ಪರಿಸರಕ್ಕಾಗಿ ನಾವು ಸಂಘಟನೆ’ಯ ಪ್ರಧಾನ ಕಾರ್ಯದರ್ಶಿ ಪರಶುರಾಮೇಗೌಡ ಅವರದಾಗಿದೆ. ‘ಪಾರಂಪರಿಕ ತಾಣವಾದರೂ ಜಿಲ್ಲಾ ಪಾರಂಪರಿಕ ಸಮಿತಿಯ ಅನುಮತಿ ಪಡೆಯದೇ ಅಲ್ಲಿ ಯಾವುದೇ ಕಟ್ಟಡಗಳನ್ನು ಕಟ್ಟುವಂತಿಲ್ಲ. ಬೆಟ್ಟದ ಮೇಲೆ ಯಾವುದೇ ಶಾಶ್ವತ ಕಾಮಗಾರಿ ಕೈಗೊಳ್ಳದಂತೆ ಈಚೆಗೆ ಹೈಕೋರ್ಟ್ ನೀಡಿರುವ ಆದೇಶವನ್ನು ಜಿಲ್ಲಾಡಳಿತ ಪಾಲಿಸುತ್ತಿಲ್ಲ’ ಎನ್ನುತ್ತಾರೆ ಅವರು.