ಮೈಸೂರು: ನಗರದಲ್ಲಿ ಎರಡು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ ಸಂಜೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದರು.

ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್, ಮುಖ್ಯಮಂತ್ರಿ ಸಿದ್ದರಾಮಯ್ಯ ಬರಮಾಡಿಕೊಂಡರು. ಅಲ್ಲಿಂದ ಅವರು ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ (ಆಯಿಷ್)ಯ ವಜ್ರಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಲು ತೆರಳಿದರು.

ಅಂಗಡಿ ಮುಂಗಟ್ಟು ಬಂದ್, ಕಟ್ಟೆಚ್ಚರ: ರಾಷ್ಟ್ರಪತಿ ಅವರು ತೆರಳುವ ರಸ್ತೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮಧ್ಯಾಹ್ನದ ಬಳಿಕ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದ್ದು, ರಸ್ತೆಯ ಇಕ್ಕೆಲಗಳಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದೆ. ಜನರ ಓಡಾಟಕ್ಕೂ ನಿರ್ಬಂಧಿಸಲಾಗಿದೆ. ನಗರದಲ್ಲಿ ಸುರಿಯುತ್ತಿರುವ ಮಳೆಯ ನಡುವೆಯೇ ಪೊಲೀಸರು ಭದ್ರತೆ ಒದಗಿಸುತ್ತಿದ್ದಾರೆ. ಸಮಾರಂಭದ ಬಳಿಕ ರಾಷ್ಟ್ರಪತಿಯು ರ್ಯಾಡಿಸನ್ ಬ್ಲೂಗೆ ತೆರಳಲಿದ್ದು, ರಾತ್ರಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.