ಮೈಸೂರು: ‘ದೇವರ ಸೇವೆ ಮಾಡುವವರು, ದೇಶದ ಸುಭಿಕ್ಷೆಯನ್ನೂ ಬಯಸುತ್ತಾರೆ’ ಎಂದು ನಟಿ ಭಾರತಿ ವಿಷ್ಣುವರ್ಧನ್ ಹೇಳಿದರು.

ಇಲ್ಲಿನ ಉದ್ಬೂರು ಗೇಟ್ ಬಳಿಯ ವಿಷ್ಣು ಸ್ಮಾರಕ ಭವನದಲ್ಲಿ ಮಂಗಳವಾರ ಅಖಿಲ ಭಾರತ ಅಸಂಘಟಿತ ಪುರೋಹಿತ ಕಾರ್ಮಿಕ ಫೆಡರೇಷನ್ನ ಮೊದಲನೇ ವರ್ಷದ ವಾರ್ಷಿಕೋತ್ಸವ ಉದ್ಘಾಟಿಸಿ, ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿದರು.

‘ಪುರೋಹಿತರ ಕಾರ್ಯ ಸ್ಮರಣೀಯ, ಫೆಡರೇಷನ್ ತಂದಿರುವ ಪಂಚಾಂಗ ಒಳಗೊಂಡ ಕ್ಯಾಲೆಂಡರ್ ಕೂಡ ಉಪಯುಕ್ತವಾಗಿದೆ’ ಎಂದರು.

ಪಾಲಿಕೆ ಮಾಜಿ ಸದಸ್ಯ ಮಾ.ವಿ.ರಾಮಪ್ರಸಾದ್, ‘ಅಸಂಘಟಿತ ಪುರೋಹಿತ ಕಾರ್ಮಿಕರಿಗೆ ಸರ್ಕಾರದ ಸವಲತ್ತುಗಳು ತಲುಪಬೇಕು. ಸಂಘಟನೆ ಬಲಿಷ್ಠವಾಗಿ ಬೆಳೆಯಲಿ’ ಎಂದು ತಿಳಿಸಿದರು.

ಸಂಸ್ಥೆಯ ರಾಷ್ಟ್ರೀಯ ಘಟಕದ ಅಧ್ಯಕ್ಷ ಎಂ.ಬಿ.ಅನಂತಮೂರ್ತಿ, ಪ್ರಧಾನ ಕಾರ್ಯದರ್ಶಿ ಬಿ.ಎನ್.ಮಹೇಶ್ ಕುಮಾರ್, ರಾಜ್ಯ ಘಟಕದ ಅಧ್ಯಕ್ಷ ಶ್ರೀನಿವಾಸ್ ಮೂರ್ತಿ, ಉಪಾಧ್ಯಕ್ಷ ಸತೀಶ್ ಸಿಂಹ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಕಾರ್ಯದರ್ಶಿ ಡಾ.ಲಕ್ಷ್ಮೀದೇವಿ, ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್, ಗೌರವಾಧ್ಯಕ್ಷ ಲಕ್ಷ್ಮೀಶ, ಅಧ್ಯಕ್ಷ ಸಂತೋಷ್ ಕುಮಾರ್ ಎಸ್.ದೇಶಿಕ್, ಉಪಾಧ್ಯಕ್ಷ ಎಂ.ವಿ.ಗಣೇಶ್, ಪ್ರಧಾನ ಕಾರ್ಯದರ್ಶಿ ರವಿಶಂಕರ್, ಕಾರ್ಯದರ್ಶಿ ಗುರುರಾಜ್, ಜಂಟಿ ಕಾರ್ಯದರ್ಶಿ ರವೀಂದ್ರ, ವಿಜಯ ವಿಠಲಚಾರ್ಯ, ಕೆಎಲ್ವಿ ಶರ್ಮ, ಎಂ.ಎನ್.ಪ್ರಸನ್ನಕುಮಾರ್, ರಾಜಣ್ಣ,
ದತ್ತ ಕುಮಾರ್, ಧನುಷ್, ವೇಣುಗೋಪಾಲ್, ಸಂತೋಷ್ ಕೆ.ಎಸ್. ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.