ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಪ್ರೊ.ಉಷಾರಾಣಿ ನಾಮ ನಿರ್ದೇಶನ

Last Updated 2 ಡಿಸೆಂಬರ್ 2022, 12:30 IST
ಅಕ್ಷರ ಗಾತ್ರ

ಮೈಸೂರು: ನಿವೃತ್ತ ಪ್ರಾಧ್ಯಾಪಕಿ ಪ್ರೊ.ಎನ್. ಉಷಾರಾಣಿ ಅವರನ್ನು ಉನ್ನತ ಶಿಕ್ಷಣ ಇಲಾಖೆಯ ರಾಜ್ಯ ಉನ್ನತ ಶಿಕ್ಷಣ ಮಂಡಳಿಯ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ ರಾಜ್ಯ ಸರ್ಕಾರವು ಆದೇಶಿಸಿದೆ.

ಉಷಾ ರಾಣಿ ಮೈಸೂರು ವಿಶ್ವವಿದ್ಯಾಲಯದ ಶೈಕ್ಷಣಿಕ ಬಹುಮಾಧ್ಯಮ ಸಂಶೋಧನಾ ಸಂಸ್ಥೆ(ಇಎಂಆರ್‌ಸಿ)ಯ ನಿರ್ದೇಶಕರಾಗಿ, ಕಲಾ ನಿಕಾಯದ ಡೀನ್, ಯುಜಿಸಿ-ಯುಪಿಇ ಸಂಯೋಜಕರಾಗಿ ಕಾರ್ಯನಿರ್ವಹಿಸಿದ್ದಾರೆ. ಐಸಿಎಸ್‌ಎಸ್‌ಆರ್ ಹಿರಿಯ ಪ್ರೊಫೆಸರ್ ಫೆಲೊ ಆಗಿಯೂ ಕೆಲಸ ಮಾಡಿದ್ದಾರೆ. ಮೈಸೂರು ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಮೂರು ದಶಕಗಳವರೆಗೆ ಕಾರ್ಯನಿರ್ವಹಿಸಿದ್ದಾರೆ. ಇದನ್ನು ಪರಿಗಣಿಸಿ ಐದು ವರ್ಷಗಳವರೆಗೆ ನಾಮನಿರ್ದೇಶನ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT