ಮೈಸೂರು: ಸೊಳ್ಳೆಗಳಿಂದ ಹರಡುವ ರೋಗಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮದ ಭಾಗವಾಗಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಚೇರಿಯಿಂದ ಮಾರ್ಚ್ 7ರಂದು ಜಿಲ್ಲಾ ಮಟ್ಟದ ‘ಸೊಳ್ಳೆ ನಿಯಂತ್ರಣ ವಿಧಾನಗಳ ಮಾದರಿ ಪ್ರದರ್ಶನ’ವನ್ನು ಇಲ್ಲಿನ ನಜರ್ಬಾದ್ನ ವೈದ್ಯರ ಭವನದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಸಿ. ಸುವರ್ಣಾ ಅಧ್ಯಕ್ಷತೆ ವಹಿಸಿದ್ದರು. ಡಿಎಚ್ಒ ಡಾ.ಪಿ.ಸಿ. ಕುಮಾರಸ್ವಾಮಿ ಮುಖ್ಯ ಅತಿಥಿಯಾಗಿದ್ದರು. ಸೊಳ್ಳೆಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ತಿಳಿಸಿಕೊಟ್ಟರು.

ಸಾರ್ವಜನಿಕ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಾಜ್ಯ ವಿಜ್ಞಾನ ಪರಿಷತ್ ಅಧಿಕಾರಿ ಹಾಗೂ ಸಿಬ್ಬಂದಿ ತೀರ್ಪುಗಾರರಾಗಿ ಭಾಗವಹಿಸಿದ್ದರು.

ಜಿಲ್ಲೆಯ ಎಲ್ಲಾ ತಾಲ್ಲೂಕು ಮಟ್ಟದಲ್ಲಿ ಸ್ಪರ್ಧಿಸಿದ್ದ ಮಕ್ಕಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ಗಳಿಸಿದ್ದ 5ರಿಂದ 7ನೇ ತರಗತಿಯ ಮೂವರು ಮತ್ತು 8ರಿಂದ 10ನೇ ತರಗತಿಯ ಮೂವರು ಮಕ್ಕಳು ಭಾಗವಹಿಸಿದ್ದರು.

ಪ್ರಾಥಮಿಕ ಶಾಲಾ ಮಕ್ಕಳು: ಪ್ರಥಮ ಬಹುಮಾನ– ನಂಜನಗೂಡು ಅಶೋಕಪುರಂನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಂದಿನಿ, ದ್ವಿತೀಯ ಬಹುಮಾನ– ಅರಸನಕೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಂಗೀತಾ, ತೃತೀಯ ಬಹುಮಾನ– ಹೂಟಗಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರೀತಂಕುಮಾರ್ ಮತ್ತು ಬಾಲಾಜಿ.

ಫ್ರೌಢಶಾಲಾ ಮಕ್ಕಳು: ಪ್ರಥಮ ಬಹುಮಾನ– ಹುಣಸೂರಿನ ಮನುಗನಹಳ್ಳಿಯ ಸರ್ಕಾರಿ ಪ್ರೌಢ ಶಾಲೆಯ ಸಿಂಚನಾ ಸಿ., ದ್ವಿತೀಯ ಬಹುಮಾನ– ಎಚ್.ಡಿ. ಕೋಟೆಯ ಮಾದಾಪುರದ ಸರ್ಕಾರಿ ಪ್ರೌಢ ಶಾಲೆಯ ಸುಷ್ಮಿತಾ ಹಾಗೂ ತೃತೀಯ ಬಹುಮಾನ –ಕೆ.ಆರ್.ನಗರದ ಆದರ್ಶ ವಿದ್ಯಾಲಯದ ಭಾವನಾ ಡಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.