ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸರ್ಕಾರಿ ಶಾಲೆಗೆ ಮುಡಾದಿಂದ ಸೌಲಭ್ಯ: ಕೆ.ಮರೀಗೌಡ

Published 10 ಮಾರ್ಚ್ 2024, 15:43 IST
Last Updated 10 ಮಾರ್ಚ್ 2024, 15:43 IST
ಅಕ್ಷರ ಗಾತ್ರ

ಮೈಸೂರು: ‘ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ)ದಿಂದ ತಾಲ್ಲೂಕಿನ ಸರ್ಕಾರಿ ಶಾಲೆಗಳಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಅಧ್ಯಕ್ಷ ಕೆ.ಮರೀಗೌಡ ತಿಳಿಸಿದರು.

ತಾಲ್ಲೂಕಿನ ಬೀರಿಹುಂಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ ನಡೆದ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಿತ ಕುಪ್ಪೇಗಾಲ ಸರ್ಕಾರಿ ಶಾಲೆಗೆ ₹ 10 ಲಕ್ಷ ನೆರವು ನೀಡಿ ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಯೋಜನೆಗೆ ಚಾಲನೆ ಕೊಟ್ಟಿದ್ದಾರೆ. ನನ್ನ ಹುಟ್ಟೂರಿನ ಈ ಶಾಲೆಗೆ (ಬೀರಿಹುಂಡಿ) ₹ 2 ಲಕ್ಷ ಮೊತ್ತದಲ್ಲಿ ವಿವಿಧ ಸಾಮಗ್ರಿಗಳನ್ನು ಕೊಡಿಸಿದ್ದೇನೆ’ ಎಂದು ಹೇಳಿದರು.

‘ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿವೆ. ಮಕ್ಕಳಿಗೆ ಹಲವು ಸೌಲಭ್ಯಗಳನ್ನು ಕಲ್ಪಿಸುತ್ತಿವೆ. ಅವುಗಳನ್ನು ಬಳಸಿಕೊಂಡು ಮುಂದೆ ಬರಬೇಕು. ಪೋಷಕರು ಶಾಲೆಗಳಿಗೆ ಆಗಾಗ ಭೇಟಿ ನೀಡಿ ಮಕ್ಕಳ ಕಲಿಕಾ ಪ್ರಗತಿಯ ಬಗ್ಗೆ ಮಾಹಿತಿ ಪಡೆಯಬೇಕು. ಮಕ್ಕಳ ವಿದ್ಯಾಭ್ಯಾಸಕ್ಕೆ ಆದ್ಯತೆ ಕೊಡಬೇಕು’ ಎಂದು ಸಲಹೆ ನೀಡಿದರು.

‘ಕೇಂದ್ರ ಸರ್ಕಾರವು ಶಿಕ್ಷಣದಲ್ಲಿ ಕೋಮುವಾದ, ಕೇಸರೀಕರಣವನ್ನು ಬಿತ್ತುತ್ತಿದೆ. ಪೋಷಕರು ಇದರ ವಿರುದ್ಧ ದನಿ ಎತ್ತಬೇಕು’ ಎಂದರು.

ನಿವೃತ್ತ ಶಿಕ್ಷಕಿ ಜಯಶ್ರೀ ಮರೀಗೌಡ ಮಾತನಾಡಿದರು. ಡಿಡಿಪಿಐ ಎಚ್‌.ಕೆ. ಪಾಂಡು, ಬಿಆರ್‌ಸಿ ಮಹದೇವ್, ಪಿಡಿಒ ರಾಮದಾಸ್, ಸುಧಾ ಅರ್. ವಸಂತ, ಮಹದೇವ್, ಅನಸೂಯಾ, ಮುರುಳಿ, ಜ್ಯೋತಿ, ಗುಡ್ಡಪ್ಪ, ಮಲ್ಲೇಶ್, ಅಕ್ಕಿ ಶಿವಣ್ಣ, ಕರೀಗೌಡ, ಡಿ.ಸಾಲುಂಡಿ ಚಂದ್ರು, ಧನಗಳ್ಳಿ ಬಸವರಾಜು, ಪ್ರಕಾಶ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT