ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೃಷ್ಟಿಕೋನಕ್ಕೆ ತಕ್ಕಂತೆ ಸೂಕ್ಷ್ಮ ಗ್ರಹಿಕೆ ಅಗತ್ಯ: ಈಶ್ವರ ರಾವ್‍

Published 24 ಮಾರ್ಚ್ 2024, 15:44 IST
Last Updated 24 ಮಾರ್ಚ್ 2024, 15:44 IST
ಅಕ್ಷರ ಗಾತ್ರ

ಮೈಸೂರು: ‘ಶಿಕ್ಷಣ ಮತ್ತು ಉದ್ಯೋಗಕ್ಕೆ ಸಂಬಂಧಿಸಿದಂತೆ ವಿಶ್ವದ ದೃಷ್ಟಿಕೋನ ಬದಲಾಗಿದ್ದು, ಅದಕ್ಕೆ ತಕ್ಕಂತೆ ವಿದ್ಯಾರ್ಥಿಗಳು ಸೂಕ್ಷ್ಮ ಗ್ರಹಿಕೆಗಳನ್ನು ರೂಢಿಸಿಕೊಳ್ಳಬೇಕು’ ಎಂದು ಜೆ.ಕೆ. ಟೈರ್ ಅಂಡ್ ಇಂಡಸ್ಟ್ರೀಸ್ ಲಿಮಿಟೆಡ್‍ನ ಉಪಾಧ್ಯಕ್ಷ ಈಶ್ವರ ರಾವ್‍ ಸಲಹೆ ನೀಡಿದರು.

ಇಲ್ಲಿನ ಊಟಿ ರಸ್ತೆಯ ಜೆಎಸ್‍ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಖಾತ್ರಿ ಕೋಶದಿಂದ ಪದವಿ ವಿದ್ಯಾರ್ಥಿಗಳಿಗಾಗಿ ಶನಿವಾರ ಆಯೋಜಿಸಿದ್ದ ಇಂಟರ್ನ್‍ಶಿಪ್ ಮತ್ತು ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಮಹತ್ತಾದ ಗುರಿಯನ್ನು ಇಟ್ಟುಕೊಂಡು ಅದನ್ನು ತಲುಪಲು ಸದಾ ಪ್ರಯತ್ನಿಸಬೇಕು. ಮಧ್ಯಮ ವರ್ಗದಿಂದ ಬಂದವರು ದೊಡ್ಡ ಕನಸುಗಳನ್ನು ಕಾಣಬೇಕು. ಕನಸುಗಳನ್ನು ಈಡೇರಿಸಿಕೊಳ್ಳಲು ಶ್ರಮ ವಹಿಸಬೇಕು. ಆ ಮೂಲಕ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸ್ಥಾನವನ್ನು ಕಂಡುಕೊಳ್ಳಬೇಕು’ ಎಂದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಮೈಸೂರು ವಿಶ್ವವಿದ್ಯಾಲಯದ ಕಾಲೇಜು ಅಭಿವೃದ್ಧಿ ಮಂಡಳಿಯ ನಿರ್ದೇಶಕ ಪ್ರೊ.ಡಿ.ಆನಂದ್‍ ಮಾತನಾಡಿ, ‘ಇದುವರೆಗೆ ಇಂಟರ್ನ್‍ಶಿಪ್ ಎಂಬುದು ಕೆಲವೇ ಅಧ್ಯಯನ ಶಿಸ್ತುಗಳಿಗೆ ಮಾತ್ರ ಸೀಮಿತವಾಗಿತ್ತು. ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಇದನ್ನು ಎಲ್ಲಾ ಅಧ್ಯಯನ ಶಿಸ್ತುಗಳಿಗೂ ಅಳವಡಿಸಲಾಗಿದೆ. ಈ ನಿಟ್ಟಿನಲ್ಲಿ ಅರಿವು ಮೂಡಿಸಲು ಕಾರ್ಯಕ್ರಮ ನಡೆಸುತ್ತಿರುವುದು ಮಾದರಿಯಾಗಿದೆ’ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಪ್ರೊ.ಬಿ.ವಿ. ಸಾಂಬಶಿವಯ್ಯ ಮಾತನಾಡಿ, ‘ಉದ್ಯೋಗ ಇಲ್ಲದವರನ್ನು ಯಾರೂ ಗುರುತಿಸುವುದಿಲ್ಲ. ಉತ್ತಮ ಉದ್ಯೋಗ ಬೇಕಾದರೆ ಉತ್ತಮ ಶಿಕ್ಷಣ ಪಡೆಯಬೇಕು. ಅದಕ್ಕಾಗಿ ಸಜ್ಜುಗೊಳಿಸಲು ಇಂಟರ್ನ್‍ಶಿಪ್‍ನಂತಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.

ವಿಜ್ಞಾನಿ ಎಂ. ಧರ್ಮಪ್ರಸಾದ್‍ ಮಾತನಾಡಿದರು.

ಪ್ರಾಂಶುಪಾಲೆ ಎಸ್. ಪ್ರತಿಭಾ, ಆಂತರಿಕ ಗುಣಮಟ್ಟ ಖಾತ್ರಿ ಕೋಶದ ಸಂಯೋಜಕ ಎನ್. ರಾಜೇಂದ್ರ ಪ್ರಸಾದ್, ಸಹಾಯಕ ಪ್ರಾಧ್ಯಾಪಕಿ ಎಂ. ರಮ್ಯಶ್ರೀ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT